ಆ್ಯಪ್ನಗರ

ಮಂಡ್ಯದಿಂದ ಸುಮಲತಾ ಅಂಬರೀಷ್ ಪಕ್ಷೇತರ ಅಭ್ಯರ್ಥಿ

ಮಂಡ್ಯದಲ್ಲಿ ಮಾರ್ಚ್ 20 ರಂದು ಬೆಳಗ್ಗೆ 10 ಗಂಟೆಗೆ ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಸಲಿದ್ದು, ಸ್ಯಾಂಡಲ್‌ವುಡ್ ಅವರಿಗೆ ಬೆಂಬಲ ಘೋಷಿಸಿದೆ.

Vijaya Karnataka Web 18 Mar 2019, 1:02 pm
ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ನಟ ಅಂಬರೀಷ್ ಪತ್ನಿ ಸುಮಲತಾ ಅಂಬರೀಷ್ ಸೋಮವಾರ ಅಧಿಕೃತವಾಗಿ ನಿರ್ಧಾರ ಪ್ರಕಟಿಸಿದ್ದಾರೆ.
Vijaya Karnataka Web Sumalatha


ಸುಮಲತಾ ಅಂಬರೀಷ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅಧಿಕೃತ ಘೋಷಣೆಯ ಸಂದರ್ಭ ಸ್ಯಾಂಡಲ್‌ವುಡ್ ನಟರಾದ ದರ್ಶನ್, ಯಶ್, ದೊಡ್ಡಣ್ಣ, ರಾಕ್‌ಲೈನ್ ವೆಂಕಟೇಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

ಮಂಡ್ಯದಲ್ಲಿ ಮಾರ್ಚ್ 20 ರಂದು ಬೆಳಗ್ಗೆ 10 ಗಂಟೆಗೆ ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಸಲಿದ್ದು, ಸ್ಯಾಂಡಲ್‌ವುಡ್ ಅವರಿಗೆ ಬೆಂಬಲ ಘೋಷಿಸಿದೆ.

ಅಂಬರೀಷ್ ನಂತರ ರಾಜಕೀಯ ಪ್ರವೇಶ ಒಲವು ಮೂಡಿದ್ದು, ಅದಕ್ಕಾಗಿ ಮಂಡ್ಯದ ಜನತೆಯ ಸೇವೆ ಮಾಡಲು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಘೋಷಿಸಿದ್ದಾರೆ.

ಇದರೊಂದಿಗೆ ಮಂಡ್ಯ ಲೋಕಸಭಾ ಕಣ ಹೈವೋಲ್ಟೇಜ್ ಕ್ಷೇತ್ರವಾಗಿದ್ದು, ರಾಜ್ಯದ ಸಮ್ಮಿಶ್ರ ಸರಕಾರದ ಮೈತ್ರಿ ಅಭ್ಯರ್ಥಿ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿಗೆ ತೀವ್ರ ಸ್ಪರ್ಧೆ ಎದುರಾಗಲಿದೆ.

ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ಹಲವು ಊಹಾಪೋಹ ಹರಿದಾಡುತ್ತಿದ್ದ ಬೆನ್ನಲ್ಲೇ, ಸುಮಲತಾ ಅಧಿಕೃತ ಘೋಷಣೆಯ ಬಳಿಕ ಮಂಡ್ಯ ಲೋಕಸಭಾ ಕ್ಷೇತ್ರದತ್ತ ಎಲ್ಲರೂ ಮುಖಮಾಡುವಂತೆ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌