ಆ್ಯಪ್ನಗರ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಆಡ್ವಾಣಿ ನಿರಾಕರಣೆ ಬಳಿಕ ಅಮಿತ್‌ ಶಾಗೆ ಟಿಕೆಟ್‌

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಎರಡು-ಮೂರು ದಿನಗಳ ಹಿಂದೆಯೇ ಆಡ್ವಾಣಿ ಹೇಳಿದ್ದರು. ಈ ವಿಷಯವನ್ನು ಅವರು ಪಕ್ಷಕ್ಕೆ ತಿಳಿಸಿದ ಬಳಿಕ, ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ತೀರ್ಮಾನವನ್ನು ವರಿಷ್ಠರಿಗೇ ಬಿಡಲಾಗಿತ್ತು ಎಂದು ಆಡ್ವಾಣಿಯವರ ಆಪ್ತರೊಬ್ಬರು ಹೇಳಿದ್ದಾರೆ.

Vijaya Karnataka Web 23 Mar 2019, 5:30 am
ಹೊಸದಿಲ್ಲಿ: ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ. ಆಡ್ವಾಣಿ (91) ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸದ ಕಾರಣದಿಂದಲೇ ಅವರು ಪ್ರತಿನಿಧಿಸುತ್ತಿದ್ದ ಗುಜರಾತ್‌ನ ಗಾಂಧಿನಗರ ಕ್ಷೇತ್ರದಿಂದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.
Vijaya Karnataka Web advani


''ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಎರಡು-ಮೂರು ದಿನಗಳ ಹಿಂದೆಯೇ ಆಡ್ವಾಣಿ ಹೇಳಿದ್ದರು. ಈ ವಿಷಯವನ್ನು ಅವರು ಪಕ್ಷಕ್ಕೆ ತಿಳಿಸಿದ ಬಳಿಕ, ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ತೀರ್ಮಾನವನ್ನು ವರಿಷ್ಠರಿಗೇ ಬಿಡಲಾಗಿತ್ತು,'' ಎಂದು ಆಡ್ವಾಣಿಯವರ ಆಪ್ತರೊಬ್ಬರು ಹೇಳಿದ್ದಾರೆ. ''ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವ ಆಲೋಚನೆಯಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸಲು ಆಡ್ವಾಣಿ ನಿರಾಕರಿಸಿರಬಹುದು. ಈ ಹಿರಿಯ ನಾಯಕನನ್ನು ರಾಜ್ಯಸಭೆಗೆ ಕಳುಹಿಸುವ ಬಗ್ಗೆಯೂ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ,'' ಎಂದು ಅವರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ 184 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಗುರುವಾರ ( ಮಾರ್ಚ್ 21,2019)ರಂದು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ 75 ವರ್ಷ ದಾಟಿದ ಕೆಲವು ನಾಯಕರನ್ನು ಕೈಬಿಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ