ಆ್ಯಪ್ನಗರ

ಕಮಲ್ ಹಾಸನ್ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕ ಸಹಿತ ಮೂವರ ವಿರುದ್ಧ FIR

ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ, ನಟ ಕಮಲ್ ಹಾಸನ್ ಮೇಲೆ ಮೊಟ್ಟೆ ಹಾಗೂ ಕಲ್ಲು ಎಸೆದ ಆರೋಪದ ಮೇಲೆ ಬಿಜೆಪಿ ಸ್ಥಾನಿಕ ಪದಾಧಿಕಾರಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Navbharat Times 18 May 2019, 9:47 am
ಕರೂರ (ತಮಿಳನಾಡು): ಇಲ್ಲಿಯ ಅರವಾಕುರಿಚಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ, ನಟ ಕಮಲ್ ಹಾಸನ್ ಮೇಲೆ ಮೊಟ್ಟೆ ಹಾಗೂ ಕಲ್ಲು ಎಸೆದ ಆರೋಪದ ಮೇಲೆ ಬಿಜೆಪಿ ಸ್ಥಾನಿಕ ಪದಾಧಿಕಾರಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
Vijaya Karnataka Web kamal


ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಮಲ್ ಹಾಸನ್ ಮೇಲೆ ದುಷ್ಕರ್ಮಿಗಳು ಮೊಟ್ಟೆ ಹಾಗೂ ಕಲ್ಲು ಎಸೆದು ಪರಾರಿಯಾಗಿದ್ದರು.

ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದರು.

ಬುಧವಾರ ಕೂಡ ಕಮಲ್ ಹಾಸನ್ ಮಧುರೈ ವಿಧಾನಸಭಾ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿನ ತಿರುಪ್ಪರಾನ್‌ಕುಂದ್ರಮ್‌ನಲ್ಲಿ ಚುನಾವಣಾ ರ‍್ಯಾಲಿ ಹಮ್ಮಿಕೊಂಡಿದ್ದರು. ವಾಹನದ ಮೇಲೆ ನಿಂತು ಕಮಲ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕೆಲವರು ಅವರ ಮೇಲೆ ಚಪ್ಪಲಿ ಎಸೆದಿದ್ದರು. ಆದರೆ ಅವು ಕಮಲ್ ವಾಹನಕ್ಕೆ ತಾಗಿ ಕೆಳಕ್ಕೆ ಬಿದ್ದಿವೆ.

ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದು ಇತ್ತೀಚೆಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರುವುದು ಗಮನಾರ್ಹ ಸಂಗತಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ