ಆ್ಯಪ್ನಗರ

ಅನುಮತಿ ಪಡೆಯದೇ ಪ್ರತಿಭಟನೆ: ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಹಿತ ನಾಲ್ವರ ವಿರುದ್ಧ ಕೇಸ್

ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ ಹಾಗೂ ಇಮ್ರಾನ್ ಸಹಿತ ಇತರರ ಮೇಲೆ ಪ್ರಕರಣ ದಾಖಲಾಗಿದೆ.

Vijaya Karnataka Web 15 Mar 2019, 10:23 pm
ಉಡುಪಿ: ಉಡುಪಿ, ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್ ಕೈ ತಪ್ಪಿ, ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವುದನ್ನು ಖಂಡಿಸಿ ಯಾವುದೇ ಅನುಮತಿ ಪಡೆಯದೇ ಅಕ್ರಮ ಗುಂಪು ಕಟ್ಟಿಕೊಂಡು ದಿಢೀರ್ ಪ್ರತಿಭಟನೆ ಕೈಗೆತ್ತಿಕೊಂಡಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಸಹಿತ ಇತರರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web case


ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ ಹಾಗೂ ಇಮ್ರಾನ್ ಸಹಿತ ಇತರರ ಮೇಲೆ ಪ್ರಕರಣ ದಾಖಲಾಗಿದೆ.

ಈ ನಾಲ್ವರು ಇತರೊಂದಿಗೆ ಗುಂಪು ಕಟ್ಟಿಕೊಂಡು ನಗರದ ಬ್ರಹ್ಮಗಿರಿಯ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಗುರುವಾರ ರಾತ್ರಿ ವೇಳೆ ಹೈಕಮಾಂಡ್‍ನ ಈ ನಿರ್ಧಾರವನ್ನು ಖಂಡಿಸಿ ಪರವಾನಿಗೆ ಪಡೆದುಕೊಳ್ಳದೇ ಪ್ರತಿಭಟನೆ ಮಾಡಿದ್ದರು. ಬಳಿಕ ಟಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದರು.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಯಾವುದೇ ಅನುಮತಿ ಪಡೆಯದೇ ಹಮ್ಮಿಕೊಂಡಿದ್ದ ಈ ದಿಡೀರ್ ಪ್ರತಿಭಟನೆಯಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌