ಆ್ಯಪ್ನಗರ

ಕಾಂಗ್ರೆಸ್ ಪ್ರಣಾಳಿಕೆ ಭಯೋತ್ಪಾದಕರು, ಪ್ರತ್ಯೇಕತಾವಾದಿಗಳಿಗೆ ಅನುಕೂಲ: ನಿರ್ಮಲಾ ಸೀತಾರಾಮನ್

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ಯನ್ನು ದುರ್ಬಲಗೊಳಿಸಿದರೆ ದೇಶದ ಭದ್ರತೆಗೆ ಅಪಾಯವಿದೆ ಎಂದು ತಿಳಿಸಿದರು. ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷ ಅಧಿಕಾರದ ಕಾಯ್ದೆಯನ್ನು ತಿದ್ದುಪಡಿ ಮಾಡುವುದಾಗಿ ಘೋಷಿಸಿತ್ತು.

Vijaya Karnataka Web 3 Apr 2019, 3:57 pm
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳಿಗೆ ಮಾತ್ರ ಅನುಕೂಲವಾಗುವಂತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
Vijaya Karnataka Web Nirmala Sitharaman


ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ಯನ್ನು ದುರ್ಬಲಗೊಳಿಸಿದರೆ ದೇಶದ ಭದ್ರತೆಗೆ ಅಪಾಯವಿದೆ ಎಂದು ತಿಳಿಸಿದರು.

ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷ ಅಧಿಕಾರದ ಕಾಯ್ದೆಯನ್ನು ತಿದ್ದುಪಡಿ ಮಾಡುವುದಾಗಿ ಘೋಷಿಸಿತ್ತು.

'ಇದು ಸರಿಯೆ? ಸಶಸ್ತ್ರ ಪಡೆಗಳನ್ನು ದುರ್ಬಲಗೊಳಿಸುವ ಹುನ್ನಾರವಿದು. ನಮ್ಮ ಭದ್ರತಾ ಪಡೆಗಳ ಶಕ್ತಿಯನ್ನು ಕುಗ್ಗಿಸಲು ಅವರು ಹವಣಿಸುತ್ತಿದ್ದಾರೆ' ಎಂದು ನಿರ್ಮಲಾ ಸೀತಾರಾಮನ್ ಟೀಕಿಸಿದರು. ಅಲ್ಲದೆ ಸಶಸ್ತ್ರ ಪಡೆಗಳನ್ನು ಕಾಂಗ್ರೆಸ್ ಯಾವತ್ತೂ ಕಡೆಗಣಿಸುತ್ತಲೇ ಬಂದಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಪಿ. ಚಿದಂಬರಂ ಇದಕ್ಕೆ ಪ್ರತಿಕ್ರಿಯಿಸಿ, 'ಕಳೆದ 5 ವರ್ಷಗಳಲ್ಲಿ ಎರಡು ಬಾರಿ ಭಯೋತ್ಪಾದಕ ದಾಳಿ ನಡೆದಿದ್ದು, ದೇಶವನ್ನು ಬಿಜೆಪಿ ದುರ್ಬಲಗೊಳಿಸಿದೆ' ಎಂದು ಹೇಳಿದ್ದಾರೆ.

'ಕಾಂಗ್ರೆಸ್ ಸಶಸ್ತ್ರ ಪಡೆಗಳನ್ನು ದುರ್ಬಲಗೊಳಿಸಲು ಬಯಸಿದೆ. ದೇಶದ್ರೋಹ ಕಾನೂನು ತೆಗೆದುಹಾಕಲು ಬಯಸಿದೆ, ಸೇನೆಯ ಅಧಿಕಾರವನ್ನು ಒಬ್ಬ ಜಿಲ್ಲಾಧಿಕಾರಿಯ ಅಧಿಕಾರದ ಮಟ್ಟಕ್ಕೆ ಕುಗ್ಗಿಸಲು ಬಯಸಿದೆ' ಎಂದು ನಿರ್ಮಲಾ ಸೀತಾರಾಮನ್ ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌