ಆ್ಯಪ್ನಗರ

ಖರ್ಗೆ ಹೆಸರೇಳಿ ದೇವೇಗೌಡರು ಲಾಭ ಪಡೆಯಲು ಯತ್ನ: ಯಡಿಯೂರಪ್ಪ

ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲು ಸೋನಿಯಾ ಗಾಂಧಿ ಒಪ್ಪಲಿಲ್ಲ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ದೇವೇಗೌಡರು ರಾಜಕೀಯ ಲಾಭ ಪಡೆಯಲು ...

Vijaya Karnataka 15 Mar 2019, 9:20 pm
ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲು ಸೋನಿಯಾ ಗಾಂಧಿ ಒಪ್ಪಲಿಲ್ಲ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ದೇವೇಗೌಡರು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಟೀಕಿಸಿದರು.
Vijaya Karnataka Web bsy


ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ ಅವರು ಈಗ ದೇವೇಗೌಡರು ಖರ್ಗೆ ಹೆಸರು ತೆಗೆದುಕೊಳ್ಳುವ ಅಗತ್ಯ ಇರಲಿಲ್ಲ. 9 ತಿಂಗಳ ಹಿಂದೆಯೇ ನಿರ್ಧಾರ ತೆಗೆದುಕೊಳ್ಳಬೇಕಾಗಿತ್ತು. ಈಗ ದೇವೇಗೌಡರು ಖರ್ಗೆ ಹೆಸರು ಹೇಳಿ ಲಾಭ ಪಡೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದರು.

ಪ್ರಸಾದ್‌ ಅಭ್ಯರ್ಥಿ: ಚಾಮರಾಜನಗರದಿಂದ ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ಅವರಿಗೆ ಸ್ಪರ್ಧಿಸಲು ಇಷ್ಟವಿರಲಿಲ್ಲ. ಆದರೆ ಅವರೇ ಸ್ಪರ್ಧೆ ಮಾಡುವಂತೆ ಸ್ಥಳೀಯರು ಹಾಗೂ ನಾವು ಒತ್ತಾಯಿಸಿದ್ದೇವೆ. ಅವರು ಅಲ್ಲಿಂದ ಸ್ಪರ್ಧಿಸಿದರೆ ದೊಡ್ಡ ಅಂತರದಿಂದ ಗೆಲ್ಲಬಹುದು. ನಾವೆಲ್ಲಾ ಅವರನ್ನು ಒಪ್ಪಿಸಿದ್ದು ಬಹುತೇಕ ಅವರೇ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ವಿಚಾರ ಇನ್ನೂ ಅಂತಿಮ ಆಗಿಲ್ಲ. ಸುಮಲತಾ ಅಂಬರೀಷ್‌ ಅವರು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿಯಾಗಿರುವುದು ಗೊತ್ತಾಗಿದೆ. ಅವರ ನಿರ್ಧಾರ ತಿಳಿಸಿದ ಬಳಿಕ ನಮ್ಮ ನಿರ್ಧಾರ ಹೇಳುತ್ತೇವೆ. ಅದೇ ರೀತಿ ಹಾಸನದ ಅಭ್ಯರ್ಥಿ ವಿಚಾರವೂ ಇನ್ನು ಅಂತಿಮವಾಗಿಲ್ಲ. ಎ. ಮಂಜು ಹೆಸರು ಕೂಡ ಅಂತಿಮವಾಗಿಲ್ಲ ಎಂದು ಹೇಳಿದರು.

ಇದಕ್ಕೂ ಮುನ್ನ ವಿ.ಶ್ರೀನಿವಾಸ ಪ್ರಸಾದ್‌ ಹಾಗೂ ಎ.ಮಂಜು ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. 'ನಾನು ಸ್ಪರ್ಧಿಸಬೇಕೆಂಬ ಒತ್ತಡವಿದೆ, ಈ ಬಗ್ಗೆ ಶನಿವಾರ ಅಂತಿಮ ತೀರ್ಮಾನ ಕೈಗೊಳ್ಳುವೆ' ಎಂದು ಪ್ರಸಾದ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌