ಆ್ಯಪ್ನಗರ

ಪಶ್ಚಿಮ ಬಂಗಾಳದಲ್ಲಿ ಬಹಿರಂಗ ಪ್ರಚಾರಕ್ಕೆ ನಾಳೆಯೇ ತೆರೆ: ಆಯೋಗದ ತೀರ್ಮಾನ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮಂಗಳವಾರ ನಡೆಸಿದ ರೋಡ್‌ ಶೋ ವೇಳೆ ಭಾರಿ ಹಿಂಸಾಚಾರ ನಡೆದಿತ್ತು. ಅಮಿತ್‌ ಶಾ ರೋಡ್‌ ಶೋಗೆ ಪ್ರತಿಯಾಗಿ ಮಮತಾ ಬ್ಯಾನರ್ಜಿ ಕೂಡ ರೋಡ್‌ ಶೋ ನಡೆಸಿದರು.

Vijaya Karnataka Web 15 May 2019, 8:10 pm
ಕೋಲ್ಕೊತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಹಿರಂಗ ಪ್ರಚಾರಕ್ಕೆ ನಾಳೆಯೇ ತೆರೆ ಹಾಕಲಾಗಿದೆ.
Vijaya Karnataka Web ಹಿಂಸಾಚಾರ
ಹಿಂಸಾಚಾರ


ಕೇಂದ್ರ ಚುನಾವಣೆ ಆಯೋಗ ಈ ರೀತಿಯ ಮಹತ್ವದ ತೀರ್ಮಾನ ಕೈಗೊಂಡಿದೆ.

ಪಶ್ಚಿಮ ಬಂಗಾಳದ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಮೇ 19ಕ್ಕೆ ಮತದಾನ ನಡೆಯಬೇಕಾಗಿತ್ತು. ವಾಡಿಕೆಯಂತೆ ಮೇ 17ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಬೇಕಾಗಿತ್ತು.

ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮಂಗಳವಾರ ನಡೆಸಿದ ರೋಡ್‌ ಶೋ ವೇಳೆ ಭಾರಿ ಹಿಂಸಾಚಾರ ನಡೆದಿತ್ತು.

ಅಮಿತ್‌ ಶಾ ರೋಡ್‌ ಶೋಗೆ ಪ್ರತಿಯಾಗಿ ಮಮತಾ ಬ್ಯಾನರ್ಜಿ ಕೂಡ ರೋಡ್‌ ಶೋ ನಡೆಸಿದರು.

ಹಿಂಸಾಚಾರ ಭುಗಿಲೇಳುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣೆ ಆಯೋಗ ಬಹಿರಂಗ ಪ್ರಚಾರದ ಅವಧಿಯನ್ನು ಮೇ 16 ರ ರಾತ್ರಿ 10 ಗಂಟೆಗೆ ಮೊಟಕುಗೊಳಿಸಿ ಆದೇಶ ಹೊರಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌