ಆ್ಯಪ್ನಗರ

#TimesMegaPoll ಹೇಳುತ್ತದೆ ಇಡೀ ದೇಶ ಮೋದಿ ಪರವಿದೆಯೆಂದು, ಬಿಎಸ್‌ವೈ

ಲೋಕಸಭೆ ಚುನಾವಣೆವರೆಗೆ ವಿಶ್ರಾಂತಿಯ ಪ್ರಶ್ನೆಯಿಲ್ಲ. ಶುಕ್ರವಾರದಿಂದಲೇ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿಎಸ್‌ ಯಡಿಯೂರಪ್ಪ ಶಪಥ ಮಾಡಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ತಿಳಿಸಿದ್ದಾರೆ.

Vijaya Karnataka 22 Feb 2019, 3:53 pm
ಬೆಂಗಳೂರು: ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಟ್ಟು ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ಗಮನ ಹರಿಸಿದ್ದಾರೆ. ಈ ನಿಟ್ಟಿನಲ್ಲಿ ಶುಕ್ರವಾರದಿಂದಲೇ ವಿಜಯ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ.
Vijaya Karnataka Web BSY


ಲೋಕಸಭೆ ಚುನಾವಣೆಗೆ ತೆರೆ ಬೀಳುವ ವರೆಗೆ ವಿಶ್ರಾಂತಿಯ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಮುಂದಿನ ಗುರಿಯಾಗಿದೆ ಎಂದು ಬಿಎಸ್‌ವೈ ಯಡಿಯೂರಪ್ಪ ಶಪಥ ಮಾಡಿದರು.

ಸಮಾವೇಶವೊಂದರಲ್ಲಿ ಮಾತನಾಡಿದ ಯಡಿಯೂರಪ್ಪ ಸಂಕಲ್ಪ ಯಾತ್ರೆ ಯಶಸ್ವಿಗೊಳಿಸಲಾಗುವುದು. ಲೋಕಸಭೆ ಚುನಾವಣೆ ಮುಗಿಯುವ ವರೆಗೆ ಮನೆಗೂ ಹೋಗುವುದಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದರು.

ಟೈಮ್ಸ್‌ ಸಮೂಹದ ಸಮೀಕ್ಷೆ ಬಗ್ಗೆ ಪ್ರಸ್ತಾಪ: 'ಟೈಮ್ಸ್‌ ಆಫ್‌ ಇಂಡಿಯ' ಸಮೂಹದ ಸಮೀಕ್ಷೆ ಬಗ್ಗೆ ಪ್ರಸ್ತಾಪಿಸಿದ ಯಡಿಯೂರಪ್ಪ, ಟೈಮ್ಸ್‌ ಆಫ್‌ ಇಂಡಿಯಾದವರು ಮಾಡಿರುವ ಸಮೀಕ್ಷೆಯಲ್ಲಿ ಶೇ.84 ರಷ್ಟು ಜನರು ಮೋದಿಯವರೇ ಮುಂದಿನ ಪ್ರಧಾನಿಯಾಗಬೇಕು ಎಂಬ ಅಭಿಪ್ರಾಯ ನೀಡಿದ್ದಾರೆ. ಈ ಸಮೀಕ್ಷೆಯಲ್ಲಿ 5 ಲಕ್ಷ ಜನರು ಭಾಗವಹಿಸಿದ್ದಾರೆ. ಹಾಗಾಗಿ ಇಡೀ ದೇಶ ಮೋದಿ ಪರವಿದೆ ಎನ್ನುವುದು ಗೊತ್ತಾಗುತ್ತದೆ. ರಾಜ್ಯದಲ್ಲಿ 22 ಸೀಟು ಗೆಲ್ಲಲು ಶ್ರಮಿಸಬೇಕು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

#TimesMegaPoll: ಟೈಮ್ಸ್‌ ಮೆಗಾ ಆನ್‌ಲೈನ್ ಸಮೀಕ್ಷೆ: ಮೋದಿಯೇ ಮತ್ತೆ ಪ್ರಧಾನಿ ಎಂದವರು ಶೇ 83 ಮಂದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌