ಆ್ಯಪ್ನಗರ

ಬಿಜೆಪಿ ನಾಯಕರಿಗೆ ಯಡಿಯೂರಪ್ಪರಿಂದ 1800 ಕೋಟಿ ರೂ. ಕಪ್ಪ ಕಾಣಿಕೆ: ಕಾಂಗ್ರೆಸ್‌ ಆರೋಪ

ಯಡಿಯೂರಪ್ಪ ಅವರು ನಿತಿನ್‌ ಗಡ್ಕರಿಗೆ, ರಾಜನಾಥ್‌ ಸಿಂಗ್‌, ಅರುಣ್‌ ಜೇಟ್ಲಿ, ಆಡ್ವಾಣಿ, ಮುರಳಿ ಮನೋಹರ್ ಜೋಷಿ, ನ್ಯಾಯಮೂರ್ತಿಗಳಿಗೆ, ವಕೀಲರಿಗೆ ಹಾಗೂ ಬಿಜೆಪಿ ಕೇಂದ್ರ ಸಮಿತಿಗೆ ಕೋಟ್ಯಂತರ ರೂ. ನೀಡಿರುವುದಾಗಿ ಡೈರಿಯಲ್ಲಿ ತಿಳಿಸಲಾಗಿದೆ.

Vijaya Karnataka Web 22 Mar 2019, 5:15 pm
ಹೊಸದಿಲ್ಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ 1800 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.
Vijaya Karnataka Web Randeep Singh Surjewala


ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೆವಾಲಾ, 'ಯಡ್ಡಿ ಡೈರಿ' ಎಂಬ ಕಿರು ಹೊತ್ತಗೆಯನ್ನು ಬಿಡುಗಡೆ ಮಾಡಿದರು.


ಈ ಡೈರಿಯ ಪ್ರಕಾರ ಯಡಿಯೂರಪ್ಪ ಅವರು ನಿತಿನ್‌ ಗಡ್ಕರಿಗೆ, ರಾಜನಾಥ್‌ ಸಿಂಗ್‌, ಅರುಣ್‌ ಜೇಟ್ಲಿ, ಆಡ್ವಾಣಿ, ಮುರಳಿ ಮನೋಹರ್ ಜೋಷಿ, ನ್ಯಾಯಮೂರ್ತಿಗಳಿಗೆ, ವಕೀಲರಿಗೆ ಹಾಗೂ ಬಿಜೆಪಿ ಕೇಂದ್ರ ಸಮಿತಿಗೆ ಕೋಟ್ಯಂತರ ರೂ. ನೀಡಿರುವುದಾಗಿ ಡೈರಿಯಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್‌ ಬಿಡುಗಡೆ ಮಾಡಿದ ಡೈರಿ


ಈ ವಿಷಯವನ್ನು ರಣದೀಪ್‌ ಸಿಂಗ್‌ ಸುರ್ಜೆವಾಲಾ ತಿಳಿಸಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಕಪ್ಪ ಕಾಣಿಕೆಗೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರರು ಆರೋಪಿಸಿದ್ದಾರೆ.

ಖಾಸಗಿ ವೆಬ್‌ಸೈಟ್‌ವೊಂದರಲ್ಲಿ ಈ ಕುರಿತು ಸಂಪೂರ್ಣ ಮಾಹಿತಿ ಇದೆ. ಯಡಿಯೂರಪ್ಪ ಅವರ ಡೈರಿಯಲ್ಲಿರುವ ಮಾಹಿತಿಗಳನ್ನು ಉಲ್ಲೇಖಿಸಲಾಗಿದೆ ಎಂದು ರಣದೀಪ್‌ ಸಿಂಗ್‌ ಸುರ್ಜೆವಾಲಾ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ