ಆ್ಯಪ್ನಗರ

ಅದ್‌ ಬಿಟ್‌, ಇದ್‌ ಬಿಟ್‌ ದೇವೇಗೌಡ್ರಿಗೆ ಯಾವ ಕ್ಷೇತ್ರ?

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರು ಲೋಕಸಭಾ ಚುನವಾಣೆ 2019ರಲ್ಲಿ ಸ್ಪರ್ಧಿಸಬಹುದು ಎಂದು ನಿರೀಕ್ಷಿಸಲಾಗಿದ್ದ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂಬುದು ಖಾತರಿಯಾಗಿದೆ. ಇನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎನ್ನಲಾಗಿದೆ. ಹಾಗಿದ್ದರೆ ಯಾವ ಕ್ಷೇತ್ರದಿಂದ ಗೌಡರು ಸ್ಪರ್ಧಿಸುತ್ತಾರೆ? ಮುಂದೆ ಓದಿ.​

Vijaya Karnataka Web 2 Mar 2019, 11:47 am
ಬೆಂಗಳೂರು: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ತವರು ಹಾಸನ ತೊರೆದು ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ನಿರೀಕ್ಷೆ ಬದಲಾಗುವ ಸಾಧ್ಯತೆಗಳು ದಟ್ಟವಾಗಿವೆ.
Vijaya Karnataka Web H D Devegowda


ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ಸ್ಪಷ್ಟ ಗುರಿಯೊಂದಿಗೆ ಲೆಕ್ಕಾಚಾರಗಳನ್ನು ಹೆಣೆಯುತ್ತಿರುವ ದೇವೇಗೌಡರು ಹಾಸನ ಅಥವಾ ಬೆಂಗಳೂರು ಉತ್ತರ ಕ್ಷೇತ್ರದ ಬದಲಿಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೂ ಅಚ್ಚರಿ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮತ್ತೊಂದೆಡೆ, ಮೈಸೂರು ಲೋಕಸಭಾ ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಇದು ಸಕಾಲ ಎಂದು ಭಾವಿಸಿರುವ ದೇವೇಗೌಡರು ಈ ಕ್ಷೇತ್ರದಿಂದಲೇ ಕಣಕ್ಕಿಳಿದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ದೇವೇಗೌಡರು ಸ್ಪರ್ಧಿಸುವ ಸಾಧ್ಯತೆಗಳಿರುವ ಕ್ಷೇತ್ರಗಳು
  1. ಹಾಸನ ಲೋಕಸಭಾ ಕ್ಷೇತ್ರ
  2. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ
  3. ತುಮಕೂರು ಲೋಕಸಭಾ ಕ್ಷೇತ್ರ
  4. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ
ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಪಕ್ಷದ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಬೆಂಬಲಿಸಿದ್ದು, ಈ ಕ್ಷೇತ್ರದಲ್ಲಿ ನಿಖಿಲ್‌ ಕುಮಾರ್‌ ಹೆಸರು ಅಂತಿಮ ಎನ್ನಲಾಗಿದೆ. ಹಾಗಾಗಿ ದೇವೇಗೌಡರು ಸ್ಪರ್ಧಿಸಬಹುದಾದ ಕ್ಷೇತ್ರಗಳ ಪೈಕಿ ಹೆಚ್ಚು ಸಾಧ್ಯತೆಗಳು ತುಮಕೂರು ಎನ್ನಲಾಗಿದೆ.

ಇನ್ನು ಮೂರ್ನಾಲ್ಕು ದಿನಗಳಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಜೆಡಿಎಸ್‌ ಭದ್ರಕೋಟೆಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದು, ಗುರುವಾರದಿಂದ ಮೈಸೂರು ಭಾಗದಲ್ಲೇ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ದೇವೇಗೌಡರೂ ಮೈಸೂರಿಗೆ ತೆರಳಿದ್ದು, ಕ್ಷೇತ್ರದ ಚುನಾವಣಾ ತಂತ್ರಗಾರಿಕೆ ಅಂತಿಮಗೊಳಿಸುವ ಪ್ರಯತ್ನ ನಡೆಯುತ್ತಿದೆ.

ನಿರೀಕ್ಷಿತ ದೇವೇಗೌಡರ ಕುಟುಂಬ ಸ್ಪರ್ಧಿಗಳು
  1. ಎಚ್‌ ಡಿ ದೇವೇಗೌಡ
  2. ಪ್ರಜ್ವಲ್‌ ರೇವಣ್ಣ
  3. ನಿಖಿಲ್‌ ಕುಮಾರ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ