ಆ್ಯಪ್ನಗರ

ಗೋಡ್ಸೆ ಸಮರ್ಥನೆ, ಗಾಂಧಿ ನಿಂದನೆ: ಸಾಧ್ವಿ ಹೇಳಿಕೆಗೆ ಕ್ಷಮೆ ನೀಡಲಾಗದು ಎಂದ ಪ್ರಧಾನಿ

'ಅವರು ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ. ಆದರೆ ನನಗೆ ಆಕೆಯನ್ನು ಕ್ಷಮಿಸಲು ಸಾಧ್ಯವಾಗುತ್ತಿಲ್ಲ' ಎಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಸ್ಪಷ್ಟಪಡಿಸಿದರು. ಭವಿಷ್ಯದಲ್ಲಿ ಇಂತಹ ನಾಯಕರು ಇಂತಹ ಹೇಳಿಕೆಗಳನ್ನು ನೀಡುವ ಮೊದಲು ನೂರು ಬಾರಿ ಯೋಚಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

Vijaya Karnataka Web 17 May 2019, 4:17 pm
ಹೊಸದಿಲ್ಲಿ: ಮಹಾತ್ಮಾ ಗಾಂಧಿ ಅವರಿಗೆ ಅವಮಾನಿಸುವಂತಹ ಹೇಳಿಕೆ ನೀಡಿದ ಭೋಪಾಲ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Vijaya Karnataka Web PM Modi


'ಅವರು ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ. ಆದರೆ ನನಗೆ ಆಕೆಯನ್ನು ಕ್ಷಮಿಸಲು ಸಾಧ್ಯವಾಗುತ್ತಿಲ್ಲ' ಎಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಸ್ಪಷ್ಟಪಡಿಸಿದರು.

ಭವಿಷ್ಯದಲ್ಲಿ ಇಂತಹ ನಾಯಕರು ಇಂತಹ ಹೇಳಿಕೆಗಳನ್ನು ನೀಡುವ ಮೊದಲು ನೂರು ಬಾರಿ ಯೋಚಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

'ನಾಥೂರಾಂ ಗೋಡ್ಸೆ ದೇಶಭಕ್ತ. ಹಿಂದೆ-ಇಂದು-ಮುಂದೆಯೂ ದೇಶಭಕ್ತನೇ. ಅವನನ್ನು ಭಯೋತ್ಪಾದಕ ಎಂದು ಕರೆಯುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಂತಹ ವ್ಯಕ್ತಿಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು' ಎಂದು ಪ್ರಜ್ಞಾ ಸಿಂಗ್ ಠಾಕೂರ್ ಗುರುವಾರ ನೀಡಿದ್ದ ಹೇಳಿಕೆ ವ್ಯಾಪಕ ವಿವಾದ ಸೃಷ್ಟಿಸಿತ್ತು.

ಗೋಡ್ಸೆ ಕುರಿತ ಪ್ರಜ್ಞಾ ಸಿಂಗ್, ಹೆಗಡೆ, ಕಟೀಲ್ ಹೇಳಿಕೆಗೂ ಬಿಜೆಪಿಗೂ ಸಂಬಂಧವಿಲ್ಲ: ಅಮಿತ್ ಶಾ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ