ಆ್ಯಪ್ನಗರ

ಟಿಕೆಟ್‌ ತೀರ್ಮಾನ: ಶಿಸ್ತು ಮೀರಿದರೆ ಕ್ರಮ ಗ್ಯಾರಂಟಿ ಎಂದ ಕೆಪಿಸಿಸಿ ಅಧ್ಯಕ್ಷ

ಚುನಾವಣಾ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಶಿಸ್ತು ಮೀರಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.

Vijaya Karnataka 3 Mar 2019, 5:00 am
ಬೆಂಗಳೂರು: ಚುನಾವಣಾ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಶಿಸ್ತು ಮೀರಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web Dinesh Gundurao


ನೇಕಾರ ಸಮುದಾಯಕ್ಕೆ ಸೇರಿದ 30ಕ್ಕೂ ಹೆಚ್ಚು ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ''ಇವರಿಗೆ ಇದೇ ಕ್ಷೇತ್ರ ಬಿಟ್ಟುಕೊಡುತ್ತೇವೆಂದು ನಾವಾಗಲಿ, ಜೆಡಿಎಸ್‌ನವರಾಗಲಿ ಎಲ್ಲೂ ಬಹಿರಂಗವಾಗಿ ಹೇಳಿಕೆ ನೀಡಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗುತ್ತದೆ. ಮಾ.4ಕ್ಕೆ ಸಮನ್ವಯ ಸಮಿತಿ ಸಭೆ ಕರೆಯಲಾಗಿದೆ,''ಎಂದು ಹೇಳಿದರು.

''ಸ್ಥಳೀಯವಾಗಿ ಆಕಾಂಕ್ಷಿಗಳು ಹಾಗೂ ಅವರ ಬೆಂಬಲಿಗರು ಹೇಳಿಕೆ ನೀಡುವುದು ತಪ್ಪಲ್ಲ. ಸುಮಲತಾ ಅಂಬರೀಶ್‌ ಮಂಡ್ಯದಿಂದ ಟಿಕೆಟ್‌ ಕೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಟಿಕೆಟ್‌ ಯಾರಿಗೆ ಕೊಡಬೇಕು ಎಂಬುದನ್ನು ವರಿಷ್ಠರು ನಿರ್ಧಾರ ಮಾಡುತ್ತಾರೆ. ಅದನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅದನ್ನು ಮೀರಿದಾಗ ಶಿಸ್ತುಕ್ರಮ ತೆಗೆದುಕೊಳ್ಳುವುದು ಅನಿವಾರ್ಯ,'' ಎಂದು ಹೇಳಿದರು. ಮಾಜಿ ಸಚಿವ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ ಭಾಗವಹಿಸಿದ್ದರು.

ಕೋಟ್‌

ಮೈಸೂರಿನಲ್ಲಿ ನಿಖಿಲ್‌ ಕುಮಾರಸ್ವಾಮಿಯವರಿಗೆ ಟಿಕೆಟ್‌ ಕೇಳಿದ್ದು ಸಚಿವ ಜಿ.ಟಿ.ದೇವೇಗೌಡರ ವೈಯಕ್ತಿಕ ಅಭಿಪ್ರಾಯ. ಆದರೆ ಟಿಕೆಟ್‌ ವಿಚಾರದಲ್ಲಿ ದೇವೇಗೌಡರು ಹೇಳಿದ್ದನ್ನು ಜಿ.ಟಿ.ದೇವೇಗೌಡರು ಕೇಳಬೇಕಾಗುತ್ತದೆ.

-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌