ಆ್ಯಪ್ನಗರ

ಲೋಕಸಭೆ ಚುನಾವಣೆ ಹಿನ್ನೆಲೆ: ಮಂಗಳೂರಿನಲ್ಲಿ 2೦೦ಕ್ಕೂ ಹೆಚ್ಚು ರೌಡಿಗಳಿಗೆ ಖಡಕ್ ಎಚ್ಚರಿಕೆ

ಚುನಾವಣೆ ಮುಗಿಯುವ ತನಕ ಸನ್ನಡತೆ ಹೊಂದಿದ್ದರೆ ಠಾಣೆಗಳಲ್ಲಿ ದಾಖಲಾಗಿರುವ ರೌಡಿ ಹಾಳೆಯನ್ನು ಮುಕ್ತಾಯ ಮಾಡುವತ್ತ ಮಹತ್ವ ನೀಡಲಾಗುವುದು. ಯಾರು ಕೂಡ ಮುಚ್ಚಳಿಕೆ ಪತ್ರದ ವಿರುದ್ಧ ನಡೆದುಕೊಳ್ಳಬಾರದು.

Vijaya Karnataka Web 14 Mar 2019, 8:17 pm
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 200ಕ್ಕೂ ಹೆಚ್ಚು ರೌಡಿಗಳನ್ನು ನಗರದ ಪೊಲೀಸ್ ಮೈದಾನದಲ್ಲಿ ಪರೇಡ್ ನಡೆಸಿ ಎಚ್ಚರಿಕೆ ನೀಡಲಾಗಿದೆ.
Vijaya Karnataka Web ಪೊಲೀಸರಿಂದ ಎಚ್ಚರಿಕೆ
ಪೊಲೀಸರಿಂದ ಎಚ್ಚರಿಕೆ


ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡುವುದು ಬಿಟ್ಟು ಸಾಮಾನ್ಯ ನಾಗರಿಕರಂತೆ ಬದುಕಬೇಕು ಎಂದು ತಿಳಿಸಲಾಗಿದೆ.

ಈಗಾಗಲೇ ತೊಡಗಿಸಿಕೊಂಡಿರುವವರು ಅದನ್ನು ಬಿಟ್ಟು ಗೌರವಯುತ ವೃತ್ತಿಗಳಲ್ಲಿ ಮುಂದುವರಿಯಬೇಕು. ಪ್ರತಿಯೊಬ್ಬರ ಚಲನವಲನಗಳನ್ನು ಇಲಾಖೆ ಗಮನಿಸುತ್ತಿರುತ್ತದೆ. ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಗೂಂಡಾ ಕಾಯಿದೆಯಂತಹ ಕಠಿಣ ಕಾನೂನು ಜಾರಿಗೊಳಿಸಿ ಗಡಿಪಾರು ಮಾಡುವ ಕೆಲಸ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆ ಮುಗಿಯುವ ತನಕ ಸನ್ನಡತೆ ಹೊಂದಿದ್ದರೆ ಠಾಣೆಗಳಲ್ಲಿ ದಾಖಲಾಗಿರುವ ರೌಡಿ ಹಾಳೆಯನ್ನು ಮುಕ್ತಾಯ ಮಾಡುವತ್ತ ಮಹತ್ವ ನೀಡಲಾಗುವುದು. ಯಾರು ಕೂಡ ಮುಚ್ಚಳಿಕೆ ಪತ್ರದ ವಿರುದ್ಧ ನಡೆದುಕೊಳ್ಳಬಾರದು. ಇದರಿಂದ ನಿಮಗೆ ಮಾತ್ರವಲ್ಲ ಕುಟುಂಬಕ್ಕೂ ತೊಂದರೆಯಾಗುತ್ತದೆ ಎಂದು ಆಯುಕ್ತರು ಎಚ್ಚರಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ್ ಗೌಡ, ದಕ್ಷಿಣ ವಿಭಾಗದ ಎಸಿಪಿ ರಾಮರಾವ್, ಕೇಂದ್ರ ವಿಭಾಗದ ಎಸಿಪಿ ಸುಧೀರ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌