ಆ್ಯಪ್ನಗರ

ಲೋಕಸಭಾ ಚುನಾವಣೆ: ನಾಲ್ಕನೇ ಹಂತದ ಪ್ರಚಾರ ಮುಕ್ತಾಯ

ಮಹಾರಾಷ್ಟ್ರದ 17, ರಾಜಸ್ಥಾನ ಮತ್ತು ಉತ್ತರ ಪ್ರದೇಶ ತಲಾ 13, ಪಶ್ಚಿಮ ಬಂಗಾಳದ 8, ಮಧ್ಯಪ್ರದೇಶ ಮತ್ತು ಒಡಿಶಾದ ತಲಾ 6, ಬಿಹಾರದ 5, ಜಾರ್ಖಂಡ್‌ನ 3 ಮತ್ತು ಜಮ್ಮು ಕಾಶ್ಮೀರದ 1 ಕ್ಷೇತ್ರಕ್ಕೆ ಮತದಾನ ನಡೆಯಲಿದೆ.

Vijaya Karnataka Web 27 Apr 2019, 9:06 pm
ಹೊಸದಿಲ್ಲಿ: ನಾಲ್ಕನೇ ಹಂತದ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಇಂದು ಸಂಜೆಗೆ ಅಂತ್ಯಗೊಂಡಿದೆ. 9 ರಾಜ್ಯಗಳ ಒಟ್ಟು 72 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದೆ.
Vijaya Karnataka Web 4th phase Polling


ಮಹಾರಾಷ್ಟ್ರದ 17, ರಾಜಸ್ಥಾನ ಮತ್ತು ಉತ್ತರ ಪ್ರದೇಶ ತಲಾ 13, ಪಶ್ಚಿಮ ಬಂಗಾಳದ 8, ಮಧ್ಯಪ್ರದೇಶ ಮತ್ತು ಒಡಿಶಾದ ತಲಾ 6, ಬಿಹಾರದ 5, ಜಾರ್ಖಂಡ್‌ನ 3 ಮತ್ತು ಜಮ್ಮು ಕಾಶ್ಮೀರದ 1 ಕ್ಷೇತ್ರಕ್ಕೆ ಮತದಾನ ನಡೆಯಲಿದೆ.

ಮೊದಲ ಮೂರು ಹಂತಗಳಲ್ಲಿ ಚುನಾವಣೆ ನಡೆದ ಕ್ಷೇತ್ರಗಳಿಗಿಂತ ಕಡಿಮೆ ಸ್ಥಾನಗಳಿಗೆ ನಾಲ್ಕನೇ ಹಂತದಲ್ಲಿ ಮತದಾನ ನಡೆಯುತ್ತಿದ್ದರೂ ಹಲವು ಪ್ರಮುಖ ಕ್ಷೇತ್ರಗಳು ಇದರಲ್ಲಿ ಸೇರಿವೆ. ಮಹಾರಾಷ್ಟ್ರದಲ್ಲಿ ಕೊನೆಯ ಹಂತದ ಚುನಾವಣೆ ಇದಾಗಿದ್ದರೆ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮೊದಲ ಹಂತದ ಮತದಾನ ಇದಾಗಿರುತ್ತದೆ.

ಮಧ್ಯಪ್ರದೇಶದ ಛಿಂದ್ವಾರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಪುತ್ರ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದರೆ, ಸಿಧಿ ಕ್ಷೇತ್ರದಲ್ಲಿ ದಿವಂಗತ ಕಾಂಗ್ರೆಸ್ ನಾಯಕ ಅರ್ಜುನ್ ಸಿಂಗ್ ಪುತ್ರ ಅಜಿತ್ ಸಿಂಗ್ ಕಣಕ್ಕಿಳಿದಿದ್ದಾರೆ. ಜಬಲ್ಪುರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ರಾಕೇಶ್ ಸಿಂಗ್ ಪುನರಾಯ್ಕೆ ಬಯಸಿದ್ದಾರೆ.

ಮಹಾರಾಷ್ಟ್ರದಲ್ಲಿ ನಟಿ ಊರ್ಮಿಳಾ ಮಾತೊಂಡ್ಕರ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ. ದಿವಂಗತ ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಅವರ ಪುತ್ರಿ ಹಾಗೂ ಕಾಂಗ್ರೆಸ್ ನಾಯಕ ಸುನಿಲ್ ದತ್ ಪುತ್ರಿ ಕೂಡ ಸ್ಪರ್ಧಿಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್, ಪಶ್ಚಿಮ ಬಂಗಾಳದ ಅಸನ್‌ಸೋಲ್‌ನಲ್ಲಿ ಹಾಲಿ ಸಂಸದ ಬಾಬುಲ್ ಸುಪ್ರಿಯೊ ಸ್ಪರ್ಧಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌