ಆ್ಯಪ್ನಗರ

ಪಶ್ಚಿಮ ಬಂಗಾಳ: 9 ಕ್ಷೇತ್ರದಲ್ಲಿ ಮಧ್ಯಮ ವರ್ಗ, ಮುಸ್ಲಿಮರೇ ನಿರ್ಣಾಯಕ ಮತದಾರರು

ಈ ಹಂತದಲ್ಲಿ ಚುನಾವಣೆಯನ್ನೆದುರಿಸುತ್ತಿರುವ ಕ್ಷೇತ್ರಗಳಲ್ಲಿ ತನ್ನ ಗೆಲುವು ನಿಶ್ಚಿತ ಎಂಬ ವಿಶ್ವಾಸದಲ್ಲಿ ಬಿಜೆಪಿ ಬೀಗುತ್ತಿದೆ. ಆದರೆ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಮುಸ್ಲಿಂ ಪ್ರಾಬಲ್ಯವೂ ಇರುವುದರಿಂದ ಅಲ್ಪಸಂಖ್ಯಾತರ ಮತದಾನ ಫಲಿತಾಂಶದಲ್ಲಿ ಮಹತ್ವದ ಪಾತ್ರ ವಹಿಸಲಿದೆ.

TIMESOFINDIA.COM 19 May 2019, 12:13 pm
ಕೋಲ್ಕತಾ: ಪಶ್ಚಿಮ ಬಂಗಾಳದ 9 ಲೋಕಸಭಾ ಕ್ಷೇತ್ರದಲ್ಲಿ ಇಂದು ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ನಗರ ಮಧ್ಯಮ ವರ್ಗದ ಜನ ಹಾಗೂ ಮುಸ್ಲಿಮರೇ ಇಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.
Vijaya Karnataka Web west


ಈ ಹಂತದಲ್ಲಿ ಚುನಾವಣೆಯನ್ನೆದುರಿಸುತ್ತಿರುವ ಕ್ಷೇತ್ರಗಳಲ್ಲಿ ತನ್ನ ಗೆಲುವು ನಿಶ್ಚಿತ ಎಂಬ ವಿಶ್ವಾಸದಲ್ಲಿ ಬಿಜೆಪಿ ಬೀಗುತ್ತಿದೆ. ಆದರೆ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಮುಸ್ಲಿಂ ಪ್ರಾಬಲ್ಯವೂ ಇರುವುದರಿಂದ ಅಲ್ಪಸಂಖ್ಯಾತರ ಮತದಾನ ಫಲಿತಾಂಶದಲ್ಲಿ ಮಹತ್ವದ ಪಾತ್ರ ವಹಿಸಲಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಕೋಲ್ಕತಾ (ದಕ್ಷಿಣ), ಕೋಲ್ಕತಾ (ಉತ್ತರ), ಜಾಧವಪುರ, ಢಮ್ ಢಮ್, ಬಾರಸತ್, ಬಸೀರ್‌ಹಾತ್, ಜಯನಗರ, ಮಥುರಾಪುರ ಮತ್ತು ಡೈಮಂಡ್ ಹಾರ್ಬರ್‌ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಗೋಚರವಾಗಿತ್ತು. ಈ ಚುನಾವಣೆಯಲ್ಲಿಯೂ ಸಹ ಅದು ಮುಂದುವರೆದಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕೋಲ್ಕತಾ (ದಕ್ಷಿಣ), ಕೋಲ್ಕತ್ತಾ (ಉತ್ತರ) ಕ್ಷೇತ್ರಗಳಲ್ಲಿ ಶೇ.25ರಷ್ಟು ಮತಗಳನ್ನು ಬಾಚಿಕೊಳ್ಳುವ ಮೂಲಕ ಬಿಜೆಪಿ ಎರಡನೇ ಸ್ಥಾನಕ್ಕೇರಿತ್ತು. ಈ ಐದು ವರ್ಷದಲ್ಲಿ ಅಪಾರ ಸಂಖ್ಯೆಯಲ್ಲಿ ವಿದ್ಯಾವಂತ ಮಧ್ಯಮ ವರ್ಗದ ಜನ ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ. ಆದರೆ, ಸದ್ಯ ರಾಜ್ಯದಲ್ಲಿ ನಡೆದ ಕೆಲ ಅಹಿತಕರ ಘಟನೆ ಸೇರಿದಂತೆ ಈಶ್ವರ ಚಂದ್ರ ವಿದ್ಯಾಸಾಗರ ಪ್ರತಿಮೆ ಧ್ವಂಸದಂತ ಘಟನೆಗಳು ಚುನಾವಣೆ ಫಲಿತಾಂಶದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಕಾದು ನೋಡಬೇಕಾಗಿದೆ.

ಈ 9 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಶೇ.20ರಷ್ಟು ಮುಸ್ಲಿಮರಿದ್ದಾರೆ. ಈ ಪೈಕಿ ಅತಿ ಹೆಚ್ಚು ಅಂದರೆ ಬಸಿರ್ಹತ್ ಕ್ಷೇತ್ರದಲ್ಲಿ 47% ಮುಸ್ಲಿಮರಿದ್ದರೆ, ಕೋಲ್ಕತಾ (ದಕ್ಷಿಣ) ದಲ್ಲಿ 21ರಷ್ಟು ಮುಸ್ಲಿಂ ಮತಗಳಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌