ಆ್ಯಪ್ನಗರ

ಪುಲ್ವಾಮಾ ದಾಳಿ ನಡೆದಾಗ ಕ್ಯಾಮೆರಾಗೆ ಪೋಸ್‌ ನೀಡುತ್ತಿದ್ದ ಪ್ರಧಾನಿ: ರಾಹುಲ್‌

ಉತ್ತರಾಖಂಡದಲ್ಲಿ ಪಕ್ಷದ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಶನಿವಾರ ಚಾಲನೆ ನೀಡಿದ ಅವರು, ಇಲ್ಲಿನ ಪರೇಡ್‌ ಗ್ರೌಂಡ್‌ನಲ್ಲಿ ಬೃಹತ್‌ ರಾರ‍ಯಲಿ ಉದ್ದೇಶಿಸಿ ರಾಹುಲ್‌ ಮಾತನಾಡಿದರು. ಪ್ರಧಾನಿ ವಿರುದ್ಧ ವಾಗ್ದಾಳಿ ಮುಂದುವರಿಸಿದರು.

Vijaya Karnataka 17 Mar 2019, 5:00 am
ಡೆಹ್ರಾಡೂನ್‌: ಫೆ.14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ ನಡೆದು 44 ಸಿಆರ್‌ಪಿಎಫ್‌ ಯೋಧರು ಮೃತಪಟ್ಟಾಗ ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಮೆರಾಗೆ ಪೋಸ್‌ ನೀಡುವುದರಲ್ಲಿ ಬ್ಯುಸಿಯಾಗಿದ್ದರು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.
Vijaya Karnataka Web raaga


ಉತ್ತರಾಖಂಡದಲ್ಲಿ ಪಕ್ಷದ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಶನಿವಾರ ಚಾಲನೆ ನೀಡಿದ ಅವರು, ಇಲ್ಲಿನ ಪರೇಡ್‌ ಗ್ರೌಂಡ್‌ನಲ್ಲಿ ಬೃಹತ್‌ ರಾರ‍ಯಲಿ ಉದ್ದೇಶಿಸಿ ರಾಹುಲ್‌ ಮಾತನಾಡಿದರು. ಪ್ರಧಾನಿ ವಿರುದ್ಧ ವಾಗ್ದಾಳಿ ಮುಂದುವರಿಸಿದರು.

''ಪುಲ್ವಾಮಾ ದಾಳಿ ಬೆನ್ನಲ್ಲೇ, ಯೋಧರು ಮತ್ತು ಸರಕಾರದ ಬೆಂಬಲಕ್ಕೆ ಇರುವುದಾಗಿ ಕಾಂಗ್ರೆಸ್‌ ವಾಗ್ದಾನ ಮಾಡಿತು. ನಾನೂ ಸಹ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದೆ. ಆದರೆ ಯೋಧರ ಮಾರಣಹೋಮ ನಡೆಯುತ್ತಿದ್ದಾಗ ಪ್ರಧಾನಿ ಮೋದಿ ಎಲ್ಲಿದ್ದರೆಂದು ಎಲ್ಲರಿಗೂ ಗೊತ್ತು. ನ್ಯಾಷನಲ್‌ ಜಿಯೋಗ್ರಫಿಕ್‌ ಚಾನೆಲ್‌ನ ಸಾಕ್ಷ್ಯಚಿತ್ರಕ್ಕಾಗಿ ಕ್ಯಾಮರಾಕ್ಕೆ ಪೋಸ್‌ ನೀಡುವುದರಲ್ಲಿ ಅವರು ಬ್ಯುಸಿಯಾಗಿದ್ದರು. ದಾಳಿ ನಡೆದ ದಿನ ಮೂರೂವರೆ ತಾಸುಗಳ ಕಾಲ ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ಮೋದಿ ಅವರು ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ,'' ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ಬಡ ಜನರಿಗೆ ಕನಿಷ್ಠ ಆದಾಯ ಖಾತರಿ ನೀಡುವ ಯೋಜನೆ ಜಾರಿಗೊಳಿಸುವುದಾಗಿ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ. ಈ ಯೋಜನೆ ಅಡಿ ಬಡವರ ಬ್ಯಾಂಕ್‌ ಖಾತೆಗಳಿಗೆ ಸರಕಾರ ನೇರವಾಗಿ ನಿಶ್ಚಿತ ಮೊತ್ತವನ್ನು ಜಮೆ ಮಾಡಲಿದೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಇದು ಅನುಷ್ಠಾನಗೊಂಡರೆ, ಇಂತಹ ಯೋಜನೆ ಜಾರಿಗೊಳಿಸಿದ ವಿಶ್ವದ ಮೊದಲ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ