ಆ್ಯಪ್ನಗರ

ಏರ್‌ಸ್ಟ್ರೈಕ್‌ ಬಗ್ಗೆ ಸಾಕ್ಷಿ ಕೇಳುತ್ತಿರುವ ಪ್ರತಿಪಕ್ಷಗಳ ನಾಯಕರ ವಿರುದ್ಧ ಮೋದಿ ಕಿಡಿ

ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಆತ್ಮಹತ್ಯಾ ದಾಳಿ ನಡೆಸಿ 40 ಸಿಆರ್‌ಪಿಎಫ್‌ ಯೋಧರನ್ನು ಬಲಿ ತೆಗೆದುಕೊಂಡ ಪಾಕ್ ಮೂಲದ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ಭಯೋತ್ಪಾದಕ ದಾಳಿಯನ್ನು ಜಗತ್ತಿನ ಹಲವು ದೇಶಗಳು ಖಂಡಿಸಿದ್ದವು. ಬಳಿಕ ಫೆ. 26 ರಂದು ಭಾರತೀಯ ವಾಯುಪಡೆ ಏರ್‌ಸ್ಟ್ರೈಕ್ ನಡೆಸಿತ್ತು.

TIMESOFINDIA.COM 3 Mar 2019, 3:49 pm
ಹೊಸದಿಲ್ಲಿ: ಪಾಕಿಸ್ತಾನದಲ್ಲಿ ಭಾರತೀಯ ವಾಯುಪಡೆ ನಡೆಸಿದ ಏರ್‌ಸ್ಟ್ರೈಕ್‌ ಅನ್ನು ಪ್ರಶ್ನಿಸುತ್ತಿರುವ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಭಾರತೀಯ ಸೇನೆ ಭಯೋತ್ಪಾದನೆಗೆ ಅಂತ್ಯ ಹಾಡುವ ಕಾರ್ಯದಲ್ಲಿ ತೊಡಗಿದ್ದು, ಕಾಂಗ್ರೆಸ್ ಹಾಗೂ ಮೈತ್ರಿಕೂಟಗಳಿಗೆ ಮಾತ್ರ ಅವರ ಶೌರ್ಯದ ಮೇಲೆ ನಂಬಿಕೆಯಿಲ್ಲ ಎಂದು ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ.
Vijaya Karnataka Web modi


ಬಿಹಾರ ರಾಜಧಾನಿ ಪಾಟ್ನಾದಲ್ಲಿ ಚುನಾವಣಾ ರ‍್ಯಾಲಿ ವೇಳೆ ಮಾತನಾಡಿದ ಮೋದಿ, ''ವಿರೋಧ ಪಕ್ಷಗಳ ಕೃತ್ಯಗಳು ಭದ್ರತಾ ಪಡೆಗಳ ಮನೋಬಲಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ರ‍್ಯಾಲಿ ವೇಳೆ ಮಾತನಾಡಿದ ಮೋದಿ, ''ಈಗ ಏರ್‌ಸ್ಟ್ರೈಕ್‌ನ ಪ್ರೂಫ್‌ ಕೇಳಲು ಆರಂಭಿಸಿದ್ದಾರೆ. ಕಾಂಗ್ರೆಸ್ ಹಾಗೂ ಮೈತ್ರಿಪಕ್ಷಗಳು ಭದ್ರತಾ ಪಡೆಗಳಿಗೆ ಅವಮಾನ ಮಾಡುತ್ತಿದ್ದಾರೆ. ಅಲ್ಲದೆ, ಇದರಿಂದ ವಿರೋಧಿಗಳಿಗೆ ಲಾಭ ಮಾಡಿ ಕೊಡುತ್ತಿದ್ದಾರೆ'' ಎಂದೂ ಪ್ರಧಾನಿ ಹೇಳಿದ್ದಾರೆ.


ಪಾಕಿಸ್ತಾನದ ಬಾಲಕೋಟ್‌ನಲ್ಲಿ ಜೈಷ್ ಎ ಮೊಹಮ್ಮದ್ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದು, ಅದನ್ನು ಕಾಂಗ್ರೆಸ್ ಹಾಗೂ ಹಲವು ಪಕ್ಷಗಳ ನಾಯಕರು ಪ್ರಶ್ನೆ ಮಾಡಿದ್ದರು.

ಇನ್ನೊಂದೆಡೆ, ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ, ''ಕೆಚ್ಚೆದೆಯ ಸೈನಿಕರ ತ್ಯಾಗಗಳನ್ನು ಮೌನವಾಗಿ ಅಂಗೀಕರಿಸಲು ಭಾರತ ಈಗ ಮೊದಲಿನ ಹಾಗಲ್ಲ'' ಎಂದಿದ್ದಾರೆ.

ಪುಲ್ವಾಮಾದಲ್ಲಿ ಆತ್ಮಹತ್ಯಾ ದಾಳಿ ನಡೆಸಿ 40 ಸಿಆರ್‌ಪಿಎಫ್‌ ಯೋಧರನ್ನು ಬಲಿ ತೆಗೆದುಕೊಂಡ ಪಾಕ್ ಮೂಲದ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ಭಯೋತ್ಪಾದಕ ದಾಳಿಯನ್ನು ಜಗತ್ತಿನ ಹಲವು ದೇಶಗಳು ಖಂಡಿಸಿದ್ದವು. ಭಯೋತ್ಪಾದನೆ ವಿರುದ್ಧ ಭಾರತ ನಡೆಸುವ ಸಮರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿವೆ. ಇನ್ನು, ದೇಶದೊಳಗಂತೂ ಭಾರೀ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗಿತ್ತು. ನಂತರ, ಭಾರತೀಯ ವಾಯುಪಡೆ ಪಾಕ್ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌