ಆ್ಯಪ್ನಗರ

ರಾಹುಲ್, ಪ್ರಿಯಾಂಕಾ ಪರಿಶ್ರಮದಿಂದ ಪ್ರತಿಪಕ್ಷ ನಾಯಕನ ಸ್ಥಾನ ಕಾಂಗ್ರೆಸ್‌ಗೆ ಖಚಿತ: ಶಿವಸೇನೆ

ರಾಹುಲ್‌, ಪ್ರಿಯಾಂಕಾ ಬಹಳಷ್ಟು ಕಷ್ಟಪಟ್ಟಿದ್ದಾರೆ. ಅವರು ಪ್ರತಿಪಕ್ಷ ಸ್ಥಾನದಲ್ಲಿ ಕೂರಲು ಅರ್ಹತೆ ಪಡೆಯಲಿದ್ದಾರೆ. 2014ರಲ್ಲಿ ಕಾಂಗ್ರೆಸ್‌ಗೆ ಪ್ರತಿಪಕ್ಷ ಸ್ಥಾನದಲ್ಲಿ ಕೂರಲೂ ಬಹುಮತ ಸಿಕ್ಕಿರಲಿಲ್ಲ ಎಂದು ವ್ಯಂಗ್ಯಭರಿತ ಟಿಪ್ಪಣಿ ಬರೆದಿದೆ.

Vijaya Karnataka Web 21 May 2019, 12:39 pm
ಮುಂಬಯಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪರಿಶ್ರಮ ಪಟ್ಟಿದ್ದಾರೆ. ಇದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ದಕ್ಕುತ್ತದೆ....
Vijaya Karnataka Web ಸಾಮ್ನಾ
ಸಾಮ್ನಾ


ಇದು ಕಾಂಗ್ರೆಸ್‌ ಪಕ್ಷವನ್ನು ಶಿವಸೇನೆ ಪರೋಕ್ಷವಾಗಿ ಕಾಲೆಳೆದ ರೀತಿ.

ಪ್ರಸಕ್ತ ಲೋಕಸಭಾ ಚುನಾವಣೆಗೆ ಸಂಬಂಧಿಸಿ ರಾಹುಲ್‌ ಗಾಂಧಿ, ಪ್ರಿಯಾಂಕಾ ಸಾಕಷ್ಟ್ರು ಶ್ರಮ ಪಟ್ಟಿದ್ದಾರೆ. ಹೀಗಾಗಿ ಅವರಿಗೆ ಪ್ರತಿಫಲ ಸಿಗುತ್ತದೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ.

ಮತಗಟ್ಟೆ ಸಮೀಕ್ಷೆಗಳ ಲೆಕ್ಕಾಚಾರವನ್ನು ಬದಿಗಿಡೋಣ. ನಮಗೆ ನಮ್ಮದೇ ಆದ ಮಾಹಿತಿ ಇದೆ. 2019ರಲ್ಲಿಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಸಂಪಾದಕೀಯದಲ್ಲಿ ಸ್ಪಷ್ಟಪಡಿಸಲಾಗಿದೆ.

ರಾಹುಲ್‌, ಪ್ರಿಯಾಂಕಾ ಬಹಳಷ್ಟು ಕಷ್ಟಪಟ್ಟಿದ್ದಾರೆ. ಅವರು ಪ್ರತಿಪಕ್ಷ ಸ್ಥಾನದಲ್ಲಿ ಕೂರಲು ಅರ್ಹತೆ ಪಡೆಯಲಿದ್ದಾರೆ. 2014ರಲ್ಲಿ ಕಾಂಗ್ರೆಸ್‌ಗೆ ಪ್ರತಿಪಕ್ಷ ಸ್ಥಾನದಲ್ಲಿ ಕೂರಲೂ ಬಹುಮತ ಸಿಕ್ಕಿರಲಿಲ್ಲ ಎಂದು ವ್ಯಂಗ್ಯಭರಿತ ಟಿಪ್ಪಣಿ ಬರೆದಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಗ್ಗೆಯೂ ಸಂಪಾದಕೀಯದಲ್ಲಿ ಟೀಕಿಸಲಾಗಿದೆ.

ಹೊಸದಿಲ್ಲಿಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮನೆಗಳಿಗೆ ತೆರಳುತ್ತಿರುವ ನಾಯ್ಡು, ಕಂಬದಿಂದ ಕಂಬಕ್ಕೆ ಸುತ್ತುತ್ತಿರುವ ನಾಯ್ಡುಗೆ ಆಯಾಸವಾಗಲಿದೆಯೇ ವಿನಃ ಯಾವುದೇ ಪ್ರತಿಫಲ ಸಿಕ್ಕಿಲ್ಲ. ಯಾವುದೇ ರೀತಿಯ ಮೈತ್ರಿಯ ಬಗ್ಗೆಯೂ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ ಎಂದು ಸಾಮ್ನಾ ಸಂಪಾದಕೀಯದಲ್ಲಿ ಸ್ಪಷ್ಟಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ