ಆ್ಯಪ್ನಗರ

ರಾಹುಲ್‌ ಗಾಂಧಿ ನಾಮಪತ್ರ ಸಿಂಧು

ಅಮೇಠಿ ಹಾಗೂ ಕೇರಳದ ವಯನಾಡಿನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಹುಲ್‌ ಗಾಂಧಿಯ ಪೌರತ್ವ ಹಾಗೂ ಶೈಕ್ಷಣಿಕ ಅರ್ಹತೆಯನ್ನು ಪ್ರಶ್ನಿಸಿ ಪಕ್ಷೇತರ ಅಭ್ಯರ್ಥಿಯೊಬ್ಬರು ಪ್ರಶ್ನಿಸಿ ದೂರು ಸಲ್ಲಿಸಿದ್ದರು. ನಾಮಪತ್ರ ತಿರಸ್ಕರಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

Vijaya Karnataka 23 Apr 2019, 5:00 am
Vijaya Karnataka Web rahul gandhi
ಅಮೇಠಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಅಮೇಠಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎದುರಾಗಿದ್ದ 'ಪೌರತ್ವ' ಅಡಚಣೆ ನಿವಾರಣೆಯಾಗಿದೆ. ರಾಹುಲ್‌ ಗಾಂಧಿ ಅವರ ನಾಮಪತ್ರವು ಸಿಂಧುವಾಗಿದ್ದು, ಅದನ್ನು ಅಂಗೀಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.

ಅಮೇಠಿ ಹಾಗೂ ಕೇರಳದ ವಯನಾಡಿನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಹುಲ್‌ ಗಾಂಧಿಯ ಪೌರತ್ವ ಹಾಗೂ ಶೈಕ್ಷಣಿಕ ಅರ್ಹತೆಯನ್ನು ಪ್ರಶ್ನಿಸಿ ಪಕ್ಷೇತರ ಅಭ್ಯರ್ಥಿಯೊಬ್ಬರು ಪ್ರಶ್ನಿಸಿ ದೂರು ಸಲ್ಲಿಸಿದ್ದರು. ನಾಮಪತ್ರ ತಿರಸ್ಕರಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

''ರಾಹುಲ್‌ ಗಾಂಧಿ 2004ರಲ್ಲಿ ಬ್ರಿಟನ್‌ನ ಕಂಪನಿಯೊಂದರಲ್ಲಿ ಹೂಡಿಕೆ ಮಾಡುವಾಗ ಬ್ರಿಟಿಷ್‌ ಪ್ರಜೆ ಎಂದು ಹೇಳಿಕೊಂಡಿದ್ದರು. ಅಲ್ಲದೆ ಅವರಿಗೆ ವಿದೇಶದಲ್ಲಿ ರಾಹುಲ್‌ ವಿನ್ಸಿ ಎಂದೂ ಹೆಸರಿದೆ. ಭಾರತದಲ್ಲಿ ಅವರು ತಮ್ಮ ಹೆಸರನ್ನು ರಾಹುಲ್‌ ಗಾಂಧಿ ಎಂದು ಹೇಳಿಕೊಳ್ಳುತ್ತಾರೆ. ಈ ಹಿಂದೆ ರಾಹುಲ್‌ ತಾವು ಡೆವಲಪ್‌ಮೆಂಟ್‌ ಎಕನಾಮಿಕ್ಸ್‌ನಲ್ಲಿ ಎಂ.ಫಿಲ್‌ ಪದವಿ ಪಡೆದಿದ್ದಾಗಿ ಹೇಳಿಕೊಂಡಿದ್ದರು, ಆದರೆ ನಂತರ ಕೇಂಬ್ರಿಡ್ಜ್‌ ಯುನಿವರ್ಸಿಟಿಯಿಂದ ಡೆವಲಪ್‌ಮೆಂಟ್‌ ಸ್ಟಡೀಸ್‌ಲ್ಲಿ ಎಂ.ಫಿಲ್‌ ಪಡೆದಿರುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಅವರ ನಾಮಪತ್ರ ತಿರಸ್ಕರಿಸಬೇಕು,'' ಎಂದು ಪಕ್ಷೇತರ ಅಭ್ಯರ್ಥಿ ಧ್ರುವ ಲಾಲ್‌ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ, ಶನಿವಾರ ನಡೆಯಬೇಕಿದ್ದ ರಾಹುಲ್‌ ಅವರ ನಾಮಪತ್ರ ಪರಿಶೀಲನೆಯನ್ನು ರಿಟರ್ನಿಂಗ್‌ ಅಧಿಕಾರಿ ಸೋಮವಾರಕ್ಕೆ ಮುಂದೂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ