ಆ್ಯಪ್ನಗರ

ಪಟ್ನಾ ಸಾಹಿಬ್‌ ಕ್ಷೇತ್ರದಲ್ಲಿ 'ಶತ್ರು' ಗೆ ಕೊಕ್‌; ಬಿಜೆಪಿಯಿಂದ ರವಿಶಂಕರ್‌ ಪ್ರಸಾದ್ ಕಣಕ್ಕೆ

ಈ ಅಭ್ಯರ್ಥಿಗಳ ಪೈಕಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್‌ ಪಟ್ನಾಸಾಹಿಬ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಳೆದ ಬಾರಿ ಶತ್ರುಘ್ನ ಸಿನ್ಹಾ ಈ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ ನಂತದ ದಿನಗಳಲ್ಲಿ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಹೈಕಮಾಂಡ್‌ ವಿರುದ್ಧ ಕಟು ಟೀಕಾಕಾರರಾಗಿ ಬದಲಾದ ಶತ್ರುಘ್ನ ಸಿನ್ಹಾ ಬಿಜೆಪಿಯಿಂದ ದೂರವಾಗಿದ್ದರು.

Vijaya Karnataka Web 23 Mar 2019, 3:27 pm
ಹೊಸದಿಲ್ಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಬಿಹಾರದಲ್ಲಿ 40 ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಬಿಜೆಪಿ ಮತ್ತು ಜೆಡಿ(ಯು) ತಲಾ 17 ಮತ್ತು ರಾಂ ವಿಲಾಸ್ ಪಾಸ್ವಾನ್ ಅವರ ಲೋಕಜನಶಕ್ತಿ ಪಕ್ಷ 6 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.
Vijaya Karnataka Web Ravi Shankar Prasad


ಈ ಅಭ್ಯರ್ಥಿಗಳ ಪೈಕಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್‌ ಪಟ್ನಾಸಾಹಿಬ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಳೆದ ಬಾರಿ ಶತ್ರುಘ್ನ ಸಿನ್ಹಾ ಈ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ ನಂತದ ದಿನಗಳಲ್ಲಿ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಹೈಕಮಾಂಡ್‌ ವಿರುದ್ಧ ಕಟು ಟೀಕಾಕಾರರಾಗಿ ಬದಲಾದ ಶತ್ರುಘ್ನ ಸಿನ್ಹಾ ಬಿಜೆಪಿಯಿಂದ ದೂರವಾಗಿದ್ದರು. ಹೀಗಾಗಿ ಈ ಬಾರಿ ಅವರಿಗೆ ಈ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಲಾಗಿದ್ದು, ರವಿಶಂಕರ್ ಪ್ರಸಾದ್ ಕಣಕ್ಕಿಳಿದಿದ್ದಾರೆ.

ಪಟ್ನಾಸಾಹಿಬ್ ಕ್ಷೇತ್ರದಿಂದ ಸ್ಪರ್ಧಿಸಲು ತಮಗೆ ಅವಕಾಶ ನೀಡಿದ ಪ್ರಧಾನಿ ಮೋದಿ ಅವರಿಗೆ ಪ್ರಸಾದ್ ಕೃತಜ್ಞತೆ ಸಲ್ಲಿಸಿದರು. 'ನಾನು ರಾಷ್ಟ್ರ ರಾಜಕಾರಣದಲ್ಲೇ ಹೆಚ್ಚು ಕೆಲಸ ಮಾಡಿದ್ದರೂ ಪಟನಾ ಬಗ್ಗೆ ನನಗೆ ಭಾವನಾತ್ಮಕ ಸಂಬಂಧಗಳಿವೆ. ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಒದಗಿಸಿದ ಪ್ರಧಾನಿ ಮೋದಿ, ಅಮಿತ್ ಶಾ ಜಿ ಮತ್ತು ಇತರ ನಾಯಕರಿಗೆ ನಾನು ಋಣಿ' ಎಂದು ಪ್ರಸಾದ್ ಪ್ರತಿಕ್ರಿಯಿಸಿದರು.

ಬಿಜೆಪಿಯಿಂದ ದೂರ ಸರಿದಿರುವ ಶತ್ರುಘ್ನ ಸಿನ್ಹಾ ಕಾಂಗ್ರೆಸ್‌ ಸೇರಿ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿಯ ಬಿಹಾರ ಉಸ್ತುವಾರಿ ಭೂಪೇಂದ್ರ ಯಾದವ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಹಾಲಿ ನೆವಾಡದ ಸಂಸದರಾಗಿರುವ ಗಿರಿರಾಜ್ ಸಿಂಗ್ ಬೇಗುಸರಾಯ್‌ನಿಂದ ಸ್ಪರ್ಧಿಸುತ್ತಾರೆ ಎಂದು ತಿಳಿಸಿದರು.

ನೆವಾಡದಿಂದ ಮಿತ್ರಪಕ್ಷ ಎಲ್‌ಜೆಪಿಯ ಚಂದನ್ ಕುಮಾರ್ ಕಣಕ್ಕಿಳಿಯುತ್ತಿದ್ದಾರೆ. ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ಜಮುಯಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ.

ರಾಮ್‌ ಕೃಪಾಲ್ ಯಾದವ್ ಪಾಟಲೀಪುತ್ರದಿಂದ, ಆರ್‌.ಕೆ ಸಿಂಗ್‌ ಅರಾ ಕ್ಷೇತ್ರದಿಂದ, ಅಶ್ವನಿ ಚೌಬೆ ಬಕ್ಸಾರ್‌ನಿಂದ, ರಾಧಾ ಮೋಹನ್ ಸಿಂಗ್‌ ಪೂರ್ವ ಚಂಪಾರಣ್‌ನಿಂದ, ರಾಜೀವ್ ಪ್ರತಾಪ್‌ ರೂಡಿ ಸರಣ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ