ಆ್ಯಪ್ನಗರ

ಮತಗಳ ಎಣಿಕೆ ದಿನ ಕಾನೂನು ಸುವ್ಯವಸ್ಥೆ ಪಾಲನೆ: ರಾಜ್ಯಗಳಿಗೆ ಗೃಹಸಚಿವಾಲಯ ಸೂಚನೆ

ಈ ಮಧ್ಯೆ ಎನ್‌ಡಿಎ ಅಂಗಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದು, ಜಾಗತಿಕ ಮಟ್ಟದಲ್ಲಿ ದೇಶದ ವರ್ಚಸ್ಸು ಹಾಗೂ ಗ್ರಹಿಕೆಯನ್ನು ಬದಲಾಯಿಸಿದ ಕೀರ್ತಿ ಅವರದ್ದು ಎಂದು ಕೊಂಡಾಡಿವೆ.

Vijaya Karnataka Web 22 May 2019, 6:54 pm
ಹೊಸದಿಲ್ಲಿ: ಮತಗಳ ಎಣಿಕೆ ದಿನ ಕಾನೂನು ಸುವ್ಯವಸ್ಥೆ ಪಾಲನೆ ವಿಚಾರದಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ. ಫಲಿತಾಂಶಗಳ ಹಿನ್ನೆಲೆಯಲ್ಲಿ ಗೃಹಸಚಿವಾಲಯ ಸಂಭಾವ್ಯ ಹಿಂಸಾಚಾರದ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮುನ್ನೆಚ್ಚರಿಕೆ ನೀಡಿದೆ.
Vijaya Karnataka Web Law and Order


ಈ ಮಧ್ಯೆ ಎನ್‌ಡಿಎ ಅಂಗಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದು, ಜಾಗತಿಕ ಮಟ್ಟದಲ್ಲಿ ದೇಶದ ವರ್ಚಸ್ಸು ಹಾಗೂ ಗ್ರಹಿಕೆಯನ್ನು ಬದಲಾಯಿಸಿದ ಕೀರ್ತಿ ಅವರದ್ದು ಎಂದು ಕೊಂಡಾಡಿವೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌, ಶಿವಸೇನಾ ವರಿಷ್ಠ ಉದ್ಧವ್ ಠಾಕ್ರೆ ಸೇರಿದಂತೆ 36 ಅಂಗಪಕ್ಷಗಳ ನಾಯಕರು ಎನ್‌ಡಿಎ ಮೈತ್ರಿಕೂಟ ನಿರ್ಣಾಯಕ ಜಯಗಳಿಸಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಎನ್‌ಡಿಎ ಒಂದು 'ಸಾವಯವ ಸಂಘಟನೆ' ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಇದು ಹಿಂದೆಂದಿಗಿಂತಲೂ ಬಲಿಷ್ಠವಾಗಿದೆ, ಜತೆಗೆ ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸಲೂ ಬದ್ಧವಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ