ಆ್ಯಪ್ನಗರ

ಚುನಾವಣೆ ಸ್ಪರ್ಧೆ ಶತಃಸಿದ್ಧ ಎಂದ ಸುಮಲತಾ ಅಂಬರೀಶ್‌

ಈಗಾಗಲೇ ಜಿಲ್ಲಾದ್ಯಂತ ಕಾಂಗ್ರೆಸ್‌ ನಾಯಕರು ಹಾಗೂ ಕಾರ‍್ಯಕರ್ತರು, ಅಂಬಿ ಅಭಿಮಾನಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ.

Vijaya Karnataka Web 12 Mar 2019, 10:20 pm
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಎಲ್ಲ 'ಕೈ' ನಾಯಕರು ನನಗೆ ಬೆಂಬಲ ನೀಡಿದ್ದು, ನನ್ನನ್ನೇ ಆಶಾಕಿರಣ ಎಂದು ಭಾವಿಸಿದ್ದಾರೆ. ಹೀಗಾಗಿ ಮಂಡ್ಯ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು ಗ್ಯಾರಂಟಿ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ.
Vijaya Karnataka Web sumalatha


ತಾಲೂಕಿನ ಕೋಡಿಶೆಟ್ಟಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಈಗಾಗಲೇ ಜಿಲ್ಲಾದ್ಯಂತ ಕಾಂಗ್ರೆಸ್‌ ನಾಯಕರು ಹಾಗೂ ಕಾರ‍್ಯಕರ್ತರು, ಅಂಬಿ ಅಭಿಮಾನಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಇನ್ನೂ ಕೆಲವು ದಿನ ಕಾಂಗ್ರೆಸ್‌ ನಿರ್ಧಾರಕ್ಕಾಗಿ ಕಾಯುತ್ತೇನೆ. ಆದರೆ, ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸ್ಪರ್ಧೆ ಖಚಿತ'' ಎಂದು ಪುನರುಚ್ಚರಿಸಿದರು.

ಗೋ ಬ್ಯಾಕ್ ಡಿಕೆಶಿ

ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಅವರಿಗೆ ಯಾವುದೇ ರೀತಿಯ ಬೆಂಬಲ ನೀಡದಂತೆ ತೀರ್ಮಾನ ಹೊರಡಿಸಿರುವ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಲವು ಮುಖಂಡರು ತಿರುಗಿ ಬಿದ್ದಿದ್ದಾರೆ. ಒಂದಷ್ಟು ಮಂದಿ ‘ಗೋಬ್ಯಾಕ್ ಡಿಕೆಶಿ’ ಎಂದು ಪ್ರಚಾರ ಮಾಡುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ