ಆ್ಯಪ್ನಗರ

ನಿಮ್ಮ ರೈತ ಉದ್ಧಾರದ ಸಲಹೆ ಕೇಳಲು ಕಾತರರಾಗಿದ್ದೇವೆ: ಸುಮಲತಾಗೆ ಸಿಎಂ ಟಾಂಗ್

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಸುಮಲತಾ ಅವರು ಅಂಬರೀಶ್​​​​ ಹಾಗೂ ಮಾಜಿ ಸಿಎಂ ಎಸ್​.ಎಂ. ಕೃಷ್ಣರನ್ನು ಸರಣಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.

Vijaya Karnataka Web 15 Mar 2019, 10:08 pm
ಮಂಡ್ಯ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಮತ್ತಷ್ಟು ರಂಗೇರಿದ್ದು, ಟ್ವಿಟರ್ ಸಹ ವಾಕ್ಸಮರಕ್ಕೆ ವೇದಿಕೆಯಾಗಿದೆ.
Vijaya Karnataka Web hdk


ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸುಮಲತಾ ಅವರು ಅಂಬರೀಶ್ ಹಾಗೂ ಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಸರಣಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.

ಗೌರವಾನ್ವಿತ ಸುಮಲತಾ ಅವರೇ, ನಿಮ್ಮ ರೈತಪರ ಮಾತು ಓದಿ ಇನ್ನಿಲ್ಲದಷ್ಟು ಸಂತೋಷವಾಯಿತು. ನನಗಾಗಲೀ ನನ್ನ ತಂದೆಯವರಿಗಾಗಲೀ ರೈತರ ಬಗ್ಗೆ ಏನೇನೂ ಗೊತ್ತಿಲ್ಲ. ಮಣ್ಣಿನ ಮಕ್ಕಳು ಎಂದು ಈ ದೇಶದ ಜನ ಪ್ರೀತಿಯಿಂದ ಕರೆದರು. ನಮ್ಮದು ರೈತರಿಗೆ ಮಿಡಿದ ಮನ. ನಿಮ್ಮ ರೈತ ಉದ್ಧಾರದ ಸಲಹೆ ಕೇಳಲು ಕಾತರರಾಗಿದ್ದೇವೆ ಎಂದು ಮುಖ್ಯಮಂತ್ರಿ ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.


ಈಗ ದಿಢೀರನೆ ಪ್ರತ್ಯಕ್ಷರಾಗಿ ಪ್ರತೀ ದಿನ ಹೊಲ ಗದ್ದೆಗಳಲ್ಲಿ ದುಡಿದು, ಉತ್ತು ಬಿತ್ತಿದ ಅನುಭವ ಹಂಚಿಕೊಳ್ಳುತ್ತಿದ್ದೀರಿ. ರೈತರನ್ನು ಉದ್ಧಾರ ಮಾಡಲು ನಿಮ್ಮ ಸಲಹೆ ತುಂಬಾ ಮುಖ್ಯ ಕೇಳಲು ನಾವು ಕಾತರರಾಗಿದ್ದೇವೆ ಎಂದು ಸುಮಲತಾ ಹೇಳಿಕೆಯನ್ನು ಸಿಎಂ ಅಣಕಿಸಿದ್ದಾರೆ.


ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿರುವ ಎಸ್.ಎಂ.ಕೃಷ್ಣ ವಿರುದ್ಧವೂ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಜೆಡಿಎಸ್ನ ಕುಟುಂಬ ರಾಜಕಾರಣದ ಬಗ್ಗೆ ಎಸ್.ಎಂ.ಕೃಷ್ಣ ಮಾಡಿದ್ದ ಟೀಕೆಗೆ ತಿರುಗೇಟು ನೀಡಿದ್ದಾರೆ.

ಮಾನ್ಯ ಕೃಷ್ಣ ಸಾಹೇಬರಿಗೆ ಗೌರವಯುತ ನಮಸ್ಕಾರಗಳು. ನೀವು ತುಂಬಾ ಮುಂದೆ ಹೆಜ್ಜೆ ಹಾಕಿಬಿಟ್ಟಿರುವುದರಿಂದ ನೀವು ನಡೆದು ಬಂದ ಹಾದಿ ಮರೆತುಹೋಗಿದೆ ಎಂದು ಭಾವಿಸುತ್ತೇನೆ. 50 ವರ್ಷ ಕಾಲ ನೀವು ಅಧಿಕಾರದ ಬೆಣ್ಣೆಯನ್ನು ಸಾಕಷ್ಟು ಮೆದ್ದಿರಿ. ನೀವು ನಡೆದು ಬಂದ ಹಾದಿ ಮರೆತು ಬಿಟ್ಟಿದ್ದೀರಿ ಎಂದು ಭಾವಿಸುತ್ತೇನೆ. ಎರಡು ಬಾರಿ ಕೇಂದ್ರ ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ, ಪಕ್ಕದ ರಾಜ್ಯದಲ್ಲಿ ರಾಜ್ಯಪಾಲರಾಗಿ ಅಧಿಕಾರ ಅನುಭವಿಸಿದಿರಿ.


ಇಷ್ಟೆಲ್ಲಾ ಆದ ಮೇಲೆ ನೀವು ಬಿಜೆಪಿಗೆ ಕಾಲಿಟ್ಟಾಗಲೇ ಟೀಕಿಸುವ ನೈತಿಕತೆಯನ್ನು ಕಳೆದುಕೊಂಡಿದ್ದೀರಿ. ಕುಟುಂಬ ರಾಜಕಾರಣವನ್ನು ಪ್ರಶ್ನೆ ಮಾಡಿದ್ದೀರಿ. ಬಹಳ ಸಂತೋಷ. ನೀವು ಬಿಜೆಪಿಗೆ ಕಾಲಿಟ್ಟಾಗಲೇ ಟೀಕಿಸುವ ನೈತಿಕತೆಯನ್ನು ಕಳೆದುಕೊಂಡಿದ್ದೀರಿ ಎಂದು ಲೇವಡಿ ಮಾಡಿದ್ದಾರೆ.

ನೀವು ಕುಟುಂಬ ರಾಜಕಾರಣವನ್ನು ಪ್ರಶ್ನಿಸಿರುವುದು ಸರಿ. ಆದರೆ, ನಮ್ಮ ಕುಟುಂಬದಲ್ಲಿ ಯಾರೂ ಹಿಂಬಾಗಿಲ ಪ್ರವೇಶ ಪಡೆದಿಲ್ಲ. ನೀವು ರಾಜ್ಯಸಭೆಗೆ ಹಿಂಬಾಗಿಲ ಮೂಲಕ ಪ್ರವೇಶ ಪಡೆಯಲು ದೇವೇಗೌಡರ ಸಹಾಯ ಪಡೆದಿರಿ ಎಂದು ಟ್ವೀಟ್ನಲ್ಲಿ ಕುಮಾರಸ್ವಾಮಿ ಬರೆದಿದ್ದಾರೆ.

ಆದರೆ ನಮ್ಮ ಕುಟುಂಬದಲ್ಲಿ ಯಾರೂ ಹಿಂಬಾಗಿಲ ಪ್ರವೇಶ ಪಡೆದಿಲ್ಲ. ಜನ ಆರಿಸಿದಾಗ ಮಾತ್ರ ಅಧಿಕಾರ ಪಡೆದಿದ್ದಾರೆ. ಆದರೆ ನೀವು ರಾಜ್ಯಸಭೆಗೆ ಹಿಂಬಾಗಿಲ ಮೂಲಕ ಪ್ರವೇಶ ಪಡೆಯಲು ದೇವೇಗೌಡರ ಸಹಾಯ ಪಡೆದದ್ದು ನೆನಪಿದೆ ಎಂದು ಭಾವಿಸುತ್ತೇನೆ‌ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ