ಆ್ಯಪ್ನಗರ

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಸುಮಿತ್ರಾ ಮಹಾಜನ್

ಇಂದೋರ್‌ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಯಾವುದೇ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ ಏಕೆ ಎಂದು ಪಕ್ಷದ ನಾಯಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, 'ಒಂದೊಮ್ಮೆ ಇಂದೋರ್‌ ಅಭ್ಯರ್ಥಿ ಹೆಸರು ಪ್ರಕಟಿಸಲು ನಾಯಕರಿಗೆ ಗೊಂದಲವಿದೆ ಎಂದಾದರೆ, ನಾನು ಇನ್ನು ಸ್ಪರ್ಧಿಸುವುದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತೇನೆ' ಎಂದು ತಿಳಿಸಿದ್ದಾರೆ.

Vijaya Karnataka Web 5 Apr 2019, 3:11 pm
ಇಂದೋರ್‌: ಇಂದೋರ್‌ನ ಜನರ ಪಾಲಿಗೆ 'ತಾಯಿ' ಎಂದೇ ಖ್ಯಾತರಾದ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್‌ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಇಂದೋರ್‌ನಿಂದ ಸತತ 8 ಬಾರಿ ಗೆದ್ದು ಬಂದಿರುವ ಅವರು ಈ ಬಾರಿ ಕಣಕ್ಕಿಳಿಯುವುದಿಲ್ಲ ಎಂದು ಘೋಷಿಸಿರುವುದು ಇಲ್ಲಿನ ಜನತೆಗೆ ಆಘಾತ ಉಂಟುಮಾಡಿದೆ.
Vijaya Karnataka Web Sumitra Mahajan


ಇಂದೋರ್‌ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಯಾವುದೇ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ ಏಕೆ ಎಂದು ಪಕ್ಷದ ನಾಯಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, 'ಒಂದೊಮ್ಮೆ ಇಂದೋರ್‌ ಅಭ್ಯರ್ಥಿ ಹೆಸರು ಪ್ರಕಟಿಸಲು ನಾಯಕರಿಗೆ ಗೊಂದಲವಿದೆ ಎಂದಾದರೆ, ನಾನು ಇನ್ನು ಸ್ಪರ್ಧಿಸುವುದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತೇನೆ' ಎಂದು ತಿಳಿಸಿದ್ದಾರೆ.

ಬಿಜೆಪಿ ನಾಯಕರು ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದೂ ಶುಕ್ರವಾರ ಬರೆದ ಪತ್ರದಲ್ಲಿ ಅವರು ತಿಳಿಸಿದರು.

ಮೊದಲ ಎರಡು ಪಟ್ಟಿಗಳಲ್ಲಿ ಇಂದೋರ್‌ ಕ್ಷೇತ್ರವನ್ನು ಬಿಜೆಪಿ ಹೊರಗಿಟ್ಟಿದೆ. ಇಂದೋರ್‌ನಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುದನ್ನು ಬಿಜೆಪಿ ಇನ್ನೂ ಪ್ರಕಟಿಸಿಲ್ಲ. ಈ ರೀತಿ ನಿರ್ಧಾರ ಕೈಗೊಳ್ಳಲಾಗದ ಗೊಂದಲವೇಕೆ? ಯಾವುದೇ ನಿರ್ಧಾರ ಕೈಗೊಳ್ಳಲು ಪಕ್ಷ ಹಿಂಜರಿಯುತ್ತಿದೆಯೆ ಎಂಬ ಸಂದೇಹವಿದೆ' ಎಂದು ಸುಮಿತ್ರಾ ಮಹಾಜನ್ ಪತ್ರದಲ್ಲಿ ಬರೆದಿದ್ದಾರೆ.

ಈ ವಾರ 76ನೇ ವರ್ಷಕ್ಕೆ ಕಾಲಿಡುತ್ತಿರುವ ಸುಮಿತ್ರಾ ಮಹಾಜನ್, ಇಂದೋರ್‌ನಿಂದ ಟಿಕೆಟ್ ವಿಚಾರದಲ್ಲಿ ಪಕ್ಷದ ನಾಯಕರ ಜತೆ ಚರ್ಚಿಸಿದ್ದಾಗಿ ತಿಳಿಸಿದರು. ಅಂತಿಮ ನಿರ್ಧಾರ ಅವರಿಗೇ ಬಿಟ್ಟಿದ್ದು. ಅವರ ಗೊಂದಲ ನಿವಾರಿಸುವುದಕ್ಕಾಗಿ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸುವುದಿಲ್ಲ ಎಂದು ಘೋಷಿಸುತ್ತಿದ್ದೇನೆ. ಪಕ್ಷ ಮುಕ್ತವಾಗಿ ನಿರ್ಧಾರ ಕೈಗೊಳ್ಳಬಹುದು. ಶೀಘ್ರವೇ ಇಂದೋರ್ ಅಭ್ಯರ್ಥಿ ಹೆಸರು ಪ್ರಕಟವಾಗಲಿದೆ ಎಂಬ ಭರವಸೆ ಹೊಂದಿದ್ದೇನೆ' ಎಂದು ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌