ಆ್ಯಪ್ನಗರ

ಅಯ್ಯಪ್ಪ ಸ್ವಾಮಿ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ

ಖ್ಯಾತ ಸಿನಿಮಾ ನಿರ್ದೇಶಕ ಸಂತೋಷ್‌ ಸಿವನ್‌ ನಿರ್ದೇಶಿಸುತ್ತಿರುವ ಅಯ್ಯಪ್ಪ ಸ್ವಾಮಿ ಕುರಿತಾದ ಭಕ್ತಿ ಪ್ರಧಾನ ಚಿತ್ರದಲ್ಲಿ ...

Vijaya Karnataka 13 Mar 2019, 5:00 am
ಖ್ಯಾತ ಸಿನಿಮಾ ನಿರ್ದೇಶಕ ಸಂತೋಷ್‌ ಸಿವನ್‌ ನಿರ್ದೇಶಿಸುತ್ತಿರುವ ಅಯ್ಯಪ್ಪ ಸ್ವಾಮಿ ಕುರಿತಾದ ಭಕ್ತಿ ಪ್ರಧಾನ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ನಟಿಸಲಿದ್ದಾರೆ. ಶ್ರೀ ಗೋಕುಲಂ ನಿರ್ಮಾಣದ ಈ ಸಿನಿಮಾದಲ್ಲಿ ಅನುಷ್ಕಾ ಮಹತ್ವದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಸಿದ್ಧ ಸಂಗೀತ ನಿರ್ದೇಶಕ ಎ.ಆರ್‌ ರಹಮಾನ್‌ ಈ ಸಿನಿಮಾಗೆ ಸಂಗೀತ ನೀಡಿದ್ದಾರೆ.
Vijaya Karnataka Web anushka shetty new


ಸಿನಿ ಪ್ರಿಯರಲ್ಲಿ ತುಂಬಾ ನಿರೀಕ್ಷೆ ಮೂಡಿಸಿರುವ ಅಯ್ಯಪ್ಪ ಸ್ವಾಮಿ ಕುರಿತಾದ ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದೆ ಭಾಷೆಗಳಲ್ಲಿ ಈ ವರ್ಷಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಅರುಂಧತಿ, ರುದ್ರಮದೇವಿ, ಬಾಹುಬಲಿ, ಭಾಗಮತಿ ಮುಂತಾದ ಸಿನಿಮಾಗಳಲ್ಲಿ ನಟಿಸುತ್ತಿರುವ ಅನುಷ್ಕಾ ಶೆಟ್ಟಿ ಸದ್ಯಕ್ಕೆ ಸೈಲೆನ್ಸ್‌ ಎಂಬ ಸಿನಿಮಾ ಶೂಟಿಂಗ್‌ನಲ್ಲಿ ಬಿಝಿಯಾಗಿದ್ದಾರೆ. ಇದರ ಜತೆಗೆಯೇ ಅವರು ಸಂತೋಷ್‌ ಸಿವನ್‌ರ ಹೊಸ ಸಿನಿಮಾ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌