ಆ್ಯಪ್ನಗರ

ಪತಿ ರಾಜ್ ಕುಂದ್ರಾಗೆ ಜಾಮೀನು: ಶಿಲ್ಪಾ ಶೆಟ್ಟಿ ಕೊಟ್ಟ ಮೊದಲ ಪ್ರತಿಕ್ರಿಯೆ

ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ಪತಿ ರಾಜ್ ಕುಂದ್ರಾ ಜಾಮೀನು ಪಡೆದ ಕೆಲವೇ ನಿಮಿಷಗಳಲ್ಲಿ, ‘’ಘೋರ ಚಂಡಮಾರುತದ ನಂತರ ಸುಂದರ ಸಂಗತಿಗಳು ಸಂಭವಿಸಬಹುದು’’ ಎಂದು ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

Vijaya Karnataka Web 21 Sep 2021, 9:59 am

ಹೈಲೈಟ್ಸ್‌:

  • ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣ
  • ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಮಂಜೂರು
  • ಶಿಲ್ಪಾ ಶೆಟ್ಟಿ ಕೊಟ್ಟ ಮೊದಲ ಪ್ರತಿಕ್ರಿಯೆ ಏನು?

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web bollywood actress shilpa shetty shares a post after husband raj kundra granted bail
ಪತಿ ರಾಜ್ ಕುಂದ್ರಾಗೆ ಜಾಮೀನು: ಶಿಲ್ಪಾ ಶೆಟ್ಟಿ ಕೊಟ್ಟ ಮೊದಲ ಪ್ರತಿಕ್ರಿಯೆ
ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಎರಡು ತಿಂಗಳಿಗೂ ಅಧಿಕ ಕಾಲ ಜೈಲಿನಲ್ಲಿದ್ದ ರಾಜ್ ಕುಂದ್ರಾಗೆ ನಿನ್ನೆ (ಸೆಪ್ಟೆಂಬರ್ 20) ಜಾಮೀನು ಸಿಕ್ಕಿದ್ದು, ಇಂದು (ಸೆಪ್ಟೆಂಬರ್ 21) ಜೈಲಿನಿಂದ ಹೊರಬರಲಿದ್ದಾರೆ.
ಪತಿ ರಾಜ್ ಕುಂದ್ರಾ ಬಂಧನಗೊಂಡ ಬಳಿಕ ನಟಿ ಶಿಲ್ಪಾ ಶೆಟ್ಟಿ ಸಾರ್ವಜನಿಕವಾಗಿ ತೀವ್ರ ಮುಜುಗರ ಅನುಭವಿಸಿದ್ದರು. ಶಿಲ್ಪಾ ಶೆಟ್ಟಿ ಮತ್ತು ಕುಟುಂಬದ ಬಗ್ಗೆ ವದಂತಿಗಳು ಹಬ್ಬಿದವು. ಕೆಲ ವರದಿಗಳಿಂದ ಬೇಸೆತ್ತ ಶಿಲ್ಪಾ ಶೆಟ್ಟಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಪತಿ ರಾಜ್ ಕುಂದ್ರಾ ಅವರಿಗೆ ಜಾಮೀನು ಸಿಕ್ಕಿದ್ದು, ನಟಿ ಶಿಲ್ಪಾ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ಪತಿ ರಾಜ್ ಕುಂದ್ರಾ ಜಾಮೀನು ಪಡೆದ ಕೆಲವೇ ನಿಮಿಷಗಳಲ್ಲಿ, ‘’ಘೋರ ಚಂಡಮಾರುತದ ನಂತರ ಸುಂದರ ಸಂಗತಿಗಳು ಸಂಭವಿಸಬಹುದು’’ ಎಂದು ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

Raj Kundra granted bail: ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಮಂಜೂರು
ನಟಿ ಶಿಲ್ಪಾ ಶೆಟ್ಟಿ ಇನ್ಸ್ಟಾಗ್ರಾಮ್ ಸ್ಟೋರಿ
‘’ಘೋರ ಚಂಡಮಾರುತದ ನಂತರ ಸುಂದರವಾದ ಸಂಗತಿಗಳು ಸಂಭವಿಸಬಹುದು ಎಂಬುದನ್ನು ಸಾಬೀತುಪಡಿಸಲು ಕಾಮನಬಿಲ್ಲು ಅಸ್ತಿತ್ವದಲ್ಲಿದೆ’’ ಎಂಬ ಕೊಟೇಷನ್ ಹೊಂದಿರುವ ಚಿತ್ರವನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಹಂಚಿಕೊಂಡಿದ್ದಾರೆ.

ಪತಿಯಿಂದ ದೂರವಾಗುವ ನಿರ್ಧಾರಕ್ಕೆ ಬಂದುಬಿಟ್ರಾ ನಟಿ ಶಿಲ್ಪಾ ಶೆಟ್ಟಿ?
ರಾಜ್ ಕುಂದ್ರಾಗೆ ಜಾಮೀನು
50 ಸಾವಿರ ರೂಪಾಯಿಗಳ ಶ್ಯೂರಿಟಿ ಮೇರೆಗೆ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ರಯಾನ್ ಥಾರ್ಪ್‌ಗೂ 50 ಸಾವಿರ ರೂಪಾಯಿಗಳ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

‘’ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ನಾವು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ವಿ. ಅದನ್ನು ನ್ಯಾಯಾಲಯ ಮಂಜೂರು ಮಾಡಿದೆ’’ ಎಂದು ರಾಜ್ ಕುಂದ್ರಾ ಪರ ವಕೀಲ ನಿರಂಜನ್ ಮುಂಡರಗಿ ತಿಳಿಸಿದ್ದಾರೆ.

'ಸೂಪರ್ ಡ್ಯಾನ್ಸರ್ 4' ಸೆಟ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಶಿಲ್ಪಾ ಶೆಟ್ಟಿ: ಅಷ್ಟಕ್ಕೂ ಆಗಿದ್ದೇನು?
1500 ಪುಟಗಳ ಸಪ್ಲಿಮೆಂಟರಿ ಚಾರ್ಜ್‌ ಶೀಟ್ ಸಲ್ಲಿಸಿದ ಪೊಲೀಸರು
ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಇತ್ತೀಚೆಗೆಷ್ಟೇ ಸಪ್ಲಿಮೆಂಟರಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಬರೋಬ್ಬರಿ 1500 ಪುಟಗಳುಳ್ಳ ಆರೋಪಪಟ್ಟಿಯನ್ನು ಮುಂಬೈ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದರು. ಚಾರ್ಜ್ ಶೀಟ್‌ನಲ್ಲಿ ಶಿಲ್ಪಾ ಶೆಟ್ಟಿ ಸೇರಿದಂತೆ 43 ಮಂದಿಯ ಹೇಳಿಕೆಗಳನ್ನು ದಾಖಲಿಸಲಾಗಿದೆ. ನಟಿ ಶೆರ್ಲಿನ್ ಚೋಪ್ರಾ, ಸೇಜಲ್ ಶಾ ಸೇರಿದಂತೆ ಅನೇಕ ಮಾಡೆಲ್‌ಗಳು, ರಾಜ್ ಕುಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವರ ಹೇಳಿಕೆಗಳನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಜೈಲು ಹಕ್ಕಿಯಾಗಿರುವ ಪತಿ ರಾಜ್ ಕುಂದ್ರಾ; ಅಂತೂ ಕೆಲಸಕ್ಕೆ ಮರಳಿದ ನಟಿ ಶಿಲ್ಪಾ ಶೆಟ್ಟಿ
ರಿಯಾಲಿಟಿ ಶೋನಲ್ಲಿ ಶಿಲ್ಪಾ ಶೆಟ್ಟಿ ಬಿಜಿ
ನಟಿ ಶಿಲ್ಪಾ ಶೆಟ್ಟಿ ಸದ್ಯ ಡ್ಯಾನ್ಸ್ ರಿಯಾಲಿಟಿ ಶೋ ‘ಸೂಪರ್ ಡ್ಯಾನ್ಸರ್ 4’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದಾರೆ. ರಾಜ್ ಕುಂದ್ರಾ ಬಂಧನದ ಬಳಿಕ ‘ಸೂಪರ್ ಡ್ಯಾನ್ಸರ್ 4’ ಕಾರ್ಯಕ್ರಮದಲ್ಲಿ ಶಿಲ್ಪಾ ಶೆಟ್ಟಿ ಕಾಣಿಸಿಕೊಂಡಿರಲಿಲ್ಲ. ಕೊಂಚ ಬ್ರೇಕ್ ಪಡೆದ ಶಿಲ್ಪಾ ಶೆಟ್ಟಿ ನಂತರ ತಮ್ಮ ತೀರ್ಪುಗಾರರ ಸ್ಥಾನಕ್ಕೆ ಮರಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌