ಆ್ಯಪ್ನಗರ

ಮರಿಲ್ ಸ್ಟ್ರೀಪ್‌ ಪ್ರಶಸ್ತಿ ಪಡೆಯುತ್ತಿರುವ ಭಾರತದ ಮೊದಲ ಮಹಿಳಾ ಸೆಲೆಬ್ರಿಟಿ ಐಶ್

ನೀಲಿ ಕಂಗಳ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್‌ ಸಾಧನೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ ಆಗಲಿದೆ.

Vijaya Karnataka Web 7 Sep 2018, 5:01 pm
ನೀಲಿ ಕಂಗಳ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್‌ ಸಾಧನೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ ಆಗಲಿದೆ. ಸಿನಿಮಾ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಗುರುತಿಸಿ ಸಿನಿಮಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿ ಮರಿಲ್ ಸ್ಟ್ರೀಪ್‌ ಪ್ರಶಸ್ತಿ ಲಭಿಸಲಿದೆ.
Vijaya Karnataka Web Aishwrya bachchan


ಈ ಮೂಲಕ ಭಾರತದಲ್ಲಿ ಈ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸೆಲೆಬ್ರಿಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿಯನ್ನು ಸೆಪ್ಟೆಂಬರ್‌ 8ರಂದು ವಾಶಿಂಗ್‌ಟನ್ ಡಿಸಿಯಲ್ಲಿ ಸ್ವೀಕರಿಸಲಿದ್ದಾರೆ.

ಹಾಲಿವುಡ್‌ ನಟಿ ಮರಿಲ್ ಸ್ಟ್ರೀಪ್‌ ಅವರು ಸಿನಿಮಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಹಾಗೂ ಆಕೆ ಸಲ್ಲಿಸಿದ ಸಮಾಜ ಸೇವೆಯನ್ನು ನೋಡಿ, ಈ ನಟಿಯ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಸಿನಿಮಾ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವವರನ್ನು ಗುರುತಿಸಿ ಅವರನ್ನು ಮತ್ತಷ್ಟು ಹುರಿದುಂಬಿಸುವ ದೃಷ್ಟಿಯಿಂದ ಈ ಪ್ರಶಸ್ತಿ ನೀಡಲಾಗುವುದು.

ಪುರುಷ ಪ್ರಧಾನ ಸಮಾಜದಲ್ಲಿ ಹಲವು ಸವಾಲುಗಳನ್ನು ಎದುರಿಸಿ ಸಿನಿಮಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಮಹಿಳಾ ಸೆಲೆಬ್ರಿಟಿಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುವುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌