ಆ್ಯಪ್ನಗರ

ಮದುವೆ ಸುದ್ದಿಗೆ ತೆರೆ ಎಳೆದ ಪ್ರಿಯಾಂಕಾ ಚೋಪ್ರಾ

ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಅವರು ಸ್ಪಷ್ಟೀಕರಣ ನೀಡಿದ್ದಾರೆ.

Vijaya Karnataka Web 1 May 2018, 2:23 pm
ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಅವರು ಸ್ಪಷ್ಟೀಕರಣ ನೀಡಿದ್ದಾರೆ. ಅವರು ಧರಿಸಿದ್ದ ಕರಿಮಣಿ ಸರವನ್ನೇ ಹೈಲೈಟ್ ಮಾಡಿ ಮದುವೆ ಆಗಿಯೇ ಹೋಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋಗಳು ಹರಿದಾಡಿದ್ದವು.
Vijaya Karnataka Web priyanka-chopra


ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಚೋಪ್ರಾ, ’ಹಹಹ..ಮದುವೆ ಕುರಿತ ಊಹೆಗಳು ತಾರಕಮಟ್ಟಕ್ಕೇರಿವೆ. ಕೆಟ್ಟ ದೃಷ್ಟಿ ಬೀಳದಂತೆ ಧರಿಸಿರುವ ಕರಿಮಣಿ ಸರ ಇದು. ನಾನು ಮದುವೆಯಾದರೆ ಖಂಡಿತ ತಿಳಿಸುತ್ತೇನೆ. ಇದರಲ್ಲಿ ರಹಸ್ಯವೇನು ಇಲ್ಲ’ ಎಂದಿದ್ದಾರೆ ಪ್ರಿಯಾಂಕಾ ಚೋಪ್ರಾ. ಅಲ್ಲಿಗೆ ಪ್ರಿಯಾಂಕಾ ಚೋಪ್ರಾ ಮದುವೆ ಸುದ್ದಿಗೆ ಬ್ರೇಕ್ ಬಿದ್ದಿದೆ.

ಸದ್ಯಕ್ಕೆ ಪ್ರಿಯಾಂಕಾ ಚೋಪ್ರಾ ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ಸಲ್ಮಾನ್ ಖಾನ್ ಜತೆಗೆ ’ಭಾರತ್’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ’ಸಲ್ಮಾನ್, ಅಲಿಯ ಜತೆಗೆ ಬೆರೆತು ಕೆಲಸ ಮಾಡುತ್ತಿರುವುದು ತುಂಬಾ ಖುಷಿಕೊಟ್ಟಿದೆ. ಅವರಿಂದ ತುಂಬಾ ಕಲಿತಿದ್ದೇನೆ’ ಎಂದಿದ್ದಾರೆ. ’ಜೈ ಗಂಗಾಜಲ್’ ಚಿತ್ರದ ಮೂರು ವರ್ಷಗಳ ಗ್ಯಾಪ್ ಬಳಿಕ ಪ್ರಿಯಾಂಕಾ ನಟಿಸುತ್ತಿರುವ ಬಾಲಿವುಡ್ ಸಿನಿಮಾ ಇದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌