ಆ್ಯಪ್ನಗರ

ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆದ ನಟಿ ಜಯಂತಿ

ಹತ್ತು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡದ ಹಿರಿಯ ನಟಿ ಜಯಂತಿ ಶುಕ್ರವಾರ ಡಿಸ್ಚಾರ್ಜ್‌ ಆಗಿದ್ದಾರೆ.

Vijaya Karnataka 6 Apr 2018, 5:32 pm
ಕಳೆದ ಹತ್ತು ದಿನಗಳಿಂದ ಬೆಂಗಳೂರಿನ ಕನ್ನಿಂಗ್‌ಹ್ಯಾಂ ರಸ್ತೆಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡದ ಹಿರಿಯ ನಟಿ ಜಯಂತಿ ಶುಕ್ರವಾರ (ಏ.4) ಡಿಸ್ಚಾರ್ಜ್‌ ಆಗಿದ್ದಾರೆ. ಅವರೀಗ ಸಂಪೂರ್ಣ ಗುಣಮುಖರಾಗಿದ್ದು, ಕೆಲವು ದಿನಗಳಿಂದ ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
Vijaya Karnataka Web jayanthi


ಆಸ್ಪತ್ರೆಯಿಂದ ಮನೆಗೆ ಹೋಗುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಆರೋಗ್ಯ ವಿಚಾರಿಸಿದ ಮತ್ತು ತಮ್ಮ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

ಭಾವುಕರಾಗಿಯೇ ಮಾತು ಆರಂಭಿಸಿದ ಜಯಂತಿ, ಅಭಿಮಾನಿಗಳು ತೋರಿದ ಪ್ರೀತಿಯನ್ನು ಯಾವತ್ತೂ ನಾನು ಮರೆಯುವುದಿಲ್ಲ ಎಂದರು. ತಮ್ಮಿಂದ ಯಾರಿಗಾದರೂ ತೊಂದರೆ ಆಗಿದ್ದರೆ, ಅದಕ್ಕೆ ಕ್ಷಮೆಯನ್ನೂ ಕೋರಿದರು.

ಸದ್ಯ ಜಯಂತಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ಕೆಲ ಕಟ್ಟುನಿಟ್ಟಿನ ಆಹಾರ ಕ್ರಮವನ್ನು ಪಾಲನೆ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌