ಆ್ಯಪ್ನಗರ

Me Too: ಶ್ರುತಿ ಹರಿಹರನ್ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ

ನಟ ಧ್ರುವ ಸರ್ಜಾ ಮೂಲಕ ಅರ್ಜುನ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದು 5 ಕೋಟಿ ರೂ ನಷ್ಟ ಪರಿಹಾರ ಸಲ್ಲಿಸಬೇಕೆಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಶೀಘ್ರದಲ್ಲೇ ಕೋರ್ಟ್ ಕೈಗೆತ್ತಿಕೊಳ್ಳಲಿದೆ.

Vijaya Karnataka Web 25 Oct 2018, 4:56 pm
ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ #MeToo ಅಭಿಯಾನದ ಮೂಲಕ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ವಿರುದ್ದ ಅರ್ಜುನ್ ಸರ್ಜಾ ಗುರುವಾರ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
Vijaya Karnataka Web arjun-sarja


ತನ್ನ ಸೋದರ ಸಂಬಂಧಿ ಹಾಗೂ ನಟ ಧ್ರುವ ಸರ್ಜಾ ಮೂಲಕ ಅರ್ಜುನ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದು 5 ಕೋಟಿ ರೂ ನಷ್ಟ ಪರಿಹಾರ ಸಲ್ಲಿಸಬೇಕೆಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಶೀಘ್ರದಲ್ಲೇ ಕೋರ್ಟ್ ಕೈಗೆತ್ತಿಕೊಳ್ಳಲಿದೆ.

ಅರ್ಜುನ್ ಸರ್ಜಾ ಟ್ವಿಟರ್ ಖಾತೆ ಹ್ಯಾಕ್
ಇನ್ನೊಂದು ಕಡೆ ನಟ ಅರ್ಜುನ್ ಸರ್ಜಾ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು ಈ ಸಂಬಂಧ ಅವರ ಮ್ಯಾನೇಜರ್ ಶಿವಾರ್ಜುನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಅರ್ಜುನ್ ಸರ್ಜಾ ಅವರ ಟ್ವಿಟರ್ ಮತ್ತು ಇ-ಮೇಲ್ ಹ್ಯಾಕ್ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಫಿಲಂ ಚೇಂಬರ್‌ನಲ್ಲಿ ಸಂಧಾನ ಸಭೆ
ಅರ್ಜುನ್ ಸರ್ಜಾ ಮತ್ತು ಶ್ರುತಿ ಹರಿರನ್ ನಡುವೆ ಇಂದು ಸಂಧಾನ ಸಭೆ ನಡೆಯುತ್ತಿದ್ದು, ಮಾಧ್ಯಮಗಳಿಗೆ ನಿಯಂತ್ರಣ ಹೇರಲಾಗಿದೆ. ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಷ್ ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಲಿದೆ.

ಸಭೆಯಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್ ಎ ಚಿನ್ನೇಗೌಡ, ನಿರ್ದೇಶಕರ ಸಂಘದ ಅಧ್ಯಕ್ಷ ವಿ ನಾಗೇಂದ್ರ ಪ್ರಸಾದ್ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಭಾಗವಹಿಸಲಿದ್ದಾರೆ.

ಸತ್ಯ ಏನು ಎಂಬುದು ನನಗೆ ಮತ್ತು ಅರ್ಜು‌ನ್‌ಗೆ ಗೊತ್ತು
ಏತನ್ಮಧ್ಯೆ ಶ್ರುತಿ ಹರಿಹರನ್ ತಮ್ಮ ಫೇಸ್‍ಬುಕ್‌ನಲ್ಲಿ ಇನ್ನೊಂದು ಪೋಸ್ಟ್ ಮಾಡಿದ್ದು, Speak only if it improves the silence" ಎಂಬ ಮಹಾತ್ಮಾಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ಒಂದಷ್ಟು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ. ಸತ್ಯ ಏನು ಎಂಬುದು ನನಗೆ ಮತ್ತು ಅರ್ಜುನ್ ಸರ್ಜಾಗೆ ಮಾತ್ರ ಗೊತ್ತು ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌