ಆ್ಯಪ್ನಗರ

ಅಭಿಮಾನಿ ಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ನಟ ದರ್ಶನ್

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಉರಮಾರಕಸಲಗೆರೆ ಗ್ರಾಮದ ಕಿರಣ್ ಎಂಬ ಅಭಿಮಾನಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಸುಮಲತಾ ನ್ಯಾಮಿನೇಷನ್ ರ‍್ಯಾಲಿಗೆ ಬಂದು ವಾಪಸ್ಸಾಗುವಾಗ ಗಂಭೀರ ಗಾಯಗೊಂಡಿದ್ದ. ಬಡ ಕುಟುಂಬವಾದ ಆತನಿಗೆ ಚಿಕಿತ್ಸೆ ಪಡೆಯಲು ಹಣದ ಅವಶ್ಯಕತೆ ಇತ್ತು.

Vijaya Karnataka Web 11 Jun 2019, 5:49 pm
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇರುವ ಫ್ಯಾನ್ಸ್ ಫಾಲೋಯಿಂಗ್ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಅಭಿಮಾನಿಗಳ ಬಗ್ಗೆಯೂ ಅಷ್ಟೇ ಅಕ್ಕರೆ ಹೊಂದಿರುವ ನಟರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಒಬ್ಬರು. ಅಪಘಾತದಲ್ಲಿ ಗಾಯಗೊಂಡಿದ್ದ ಅಭಿಮಾನಿಯೊಬ್ಬನಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾನವೀಯತೆ ಮೆರೆದಿದ್ದಾರೆ.
Vijaya Karnataka Web darshan.


ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಉರಮಾರಕಸಲಗೆರೆ ಗ್ರಾಮದ ಕಿರಣ್ ಎಂಬ ಅಭಿಮಾನಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಸುಮಲತಾ ನ್ಯಾಮಿನೇಷನ್ ರ‍್ಯಾಲಿಗೆ ಬಂದು ವಾಪಸ್ಸಾಗುವಾಗ ಗಂಭೀರ ಗಾಯಗೊಂಡಿದ್ದ. ಬಡ ಕುಟುಂಬವಾದ ಆತನಿಗೆ ಚಿಕಿತ್ಸೆ ಪಡೆಯಲು ಹಣದ ಅವಶ್ಯಕತೆ ಇತ್ತು. ಇದನ್ನು ಮನಗಂಡ ನಟ ದರ್ಶನ್ ತಮ್ಮ ಆಪ್ತ ಇಂಡುವಾಳು ಸಚ್ಚಿದಾನಂದ ಅವ್ರ ಮೂಲಕ ಒಂದು ಲಕ್ಷ ರೂ. ಹಣವನ್ನು ಕಿರಣ್ ಕುಟುಂಬಕ್ಕೆ ತಲುಪಿಸಿದ್ದಾರೆ.

'ಯಜಮಾನ' ದರ್ಶನ್ ಅವರ ಈ ಸಹಾಯ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌