ಆ್ಯಪ್ನಗರ

ಸಿದ್ದಗಂಗಾ ಮಠದಲ್ಲಿ ಇಂದ್ರಜಿತ್‌ ಲಂಕೇಶ್ ಬರ್ತ್‌ ಡೇ

ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ಉದ್ದೇಶದಿಂದ ಪ್ರತಿ ವರ್ಷವೂ ಒಂದಿಲ್ಲೊಂದು ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ. ಈ ಬಾರಿ ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೆ ನನ್ನ ತಂದೆಯ ಪುಸ್ತಕಗಳನ್ನು ಕೊಡುತ್ತಿದ್ದೇನೆ ಎಂದಿದ್ದಾರೆ ಇಂದ್ರಜಿತ್ ಲಂಕೇಶ್.

Vijaya Karnataka 22 Sep 2018, 11:13 am
ಕಿರುತೆರೆ, ಸ್ಯಾಂಡಲ್‌ವುಡ್‌ ಮತ್ತು ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿರುವ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಮಠದ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ.
Vijaya Karnataka Web indrajit-lankesh


'ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ಉದ್ದೇಶದಿಂದ ಪ್ರತಿ ವರ್ಷವೂ ಒಂದಿಲ್ಲೊಂದು ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ. ಈ ಬಾರಿ ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೆ ನನ್ನ ತಂದೆಯ ಪುಸ್ತಕಗಳನ್ನು ಕೊಡುತ್ತಿದ್ದೇನೆ. ಮಕ್ಕಳೊಂದಿಗೆ ಕೆಲ ಸಮಯ ಕಳೆಯುತ್ತೇನೆ' ಎಂದು ತಿಳಿಸಿದ್ದಾರೆ ಇಂದ್ರಜಿತ್‌.

ಎರಡು ದಶಕಗಳಿಂದ ಸಿನಿಮಾ ರಂಗದಲ್ಲಿ ಕೆಲಸ ಮಾಡಿರುವ ಇವರು, ಈವರೆಗೂ ಹತ್ತಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಮೊದಲ ಬಾರಿಗೆ ಬಾಲಿವುಡ್‌ಗೂ ಹಾರಿದ್ದಾರೆ. ಸದ್ಯ ಇವರು ಮಲೆಯಾಳಂ ಖ್ಯಾತ ತಾರೆ ಶಕೀಲಾ ಜೀವನ ಆಧರಿತ ಚಿತ್ರವನ್ನು ಹಿಂದಿಯಲ್ಲಿ ಮಾಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಕಲಾವಿದರನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

'ಕನ್ನಡದಲ್ಲಿ ಹತ್ತಾರು ಸಿನಿಮಾಗಳನ್ನು ಮಾಡಿದ್ದೇನೆ. ಕಿರುತೆರೆಯಲ್ಲೂ ಗುರುತಿಸಿಕೊಂಡಿದ್ದೇನೆ. ಮೊದಲ ಬಾರಿಗೆ ಬಾಲಿವುಡ್‌ನಲ್ಲಿ ಚಿತ್ರ ಮಾಡುತ್ತಿದ್ದೇನೆ. ಈಗಾಗಲೇ ಶಕೀಲಾ ಸಿನಿಮಾದ ಬಹುತೇಕ ಶೂಟಿಂಗ್‌ ಮುಗಿದಿದೆ. ಭಾರತೀಯ ಸಿನಿಮಾ ರಂಗಕ್ಕೆ ಒಳ್ಳೆಯ ಸಿನಿಮಾ ಕೊಡಬೇಕು ಎಂಬ ಉದ್ದೇಶ ನನ್ನದು' ಎನ್ನುವುದು ಇಂದ್ರಜಿತ್‌ ಮಾತು.

ಕನ್ನಡದ ನಿರ್ದೇಶಕರೊಬ್ಬರು ಬಾಲಿವುಡ್‌ನಲ್ಲಿ ಸಿನಿಮಾ ಮಾಡುವುದು ಸುಲಭವಲ್ಲ. ಶಕೀಲಾ ಚಿತ್ರವನ್ನು ಹಿಂದಿಗೆ ಮಾಡುತ್ತಿದ್ದೇನೆ. ಬಾಲಿವುಡ್‌ನಲ್ಲಿ ಈಗಾಗಲೇ ಈ ಚಿತ್ರದ ಬಗ್ಗೆ ಅಲ್ಲಿನ ತಂತ್ರಜ್ಞರು ಮಾತಾಡುತ್ತಿದ್ದಾರೆ. ನಿಜಕ್ಕೂ ಇದೊಂದು ಹೆಮ್ಮೆ.
ಇಂದ್ರಜಿತ್‌ ಲಂಕೇಶ್‌, ನಿರ್ದೇಶಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌