ಆ್ಯಪ್ನಗರ

ಅಮಿತ್ ಶಾ 'ಹಿಂದಿ' ಹೇಳಿಕೆ ವಿರುದ್ಧ ತಿರುಗಿಬಿದ್ದ ಸೂಪರ್ ಸ್ಟಾರ್ ರಜನಿಕಾಂತ್

ಒಂದೇ ಭಾಷೆ ಒಂದೇ ದೇಶ ಎಂಬ ಅಮಿತ್ ಶಾ ಹೇಳಿಕೆಗೆ ಸೂಪರ್ ಸ್ಟಾರ್ ರಜನಿಕಾಂತ್ ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ ಇದನ್ನು ದಕ್ಷಿಣದ ಯಾವ ರಾಜ್ಯವೂ ಒಪ್ಪಲ್ಲ. ಇದರಿಂದ ಅಭಿವೃದ್ಧಿ, ಏಕತೆ ಸಾಧ್ಯವಿಲ್ಲ ಎಂದಿದ್ದಾರೆ.

Vijaya Karnataka Web 18 Sep 2019, 2:07 pm
ಒಂದೇ ಭಾಷೆ ಒಂದೇ ದೇಶ ಎಂಬ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಈಗಾಗಲೆ ಹಲವಾರು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಸಹ ಈ ಬಗ್ಗೆ ಮೌನ ಮುರಿದಿದ್ದಾರೆ. "ಯಾವುದೇ ಭಾಷೆಯನ್ನು ಏಕ ಭಾಷೆ ಎಂಬ ಪರಿಕಲ್ಪನೆಯಲ್ಲಿ ಹೇರಿಕೆ ಮಾಡುವುದು ಸರಿಯಲ್ಲ. ಈ ದೇಶದಲ್ಲಿ ಅದು ಸಾಧ್ಯವಾಗುವುದೂ ಇಲ್ಲ" ಎಂದಿದ್ದಾರೆ.
Vijaya Karnataka Web ranikanth


ದೇಶಕ್ಕೆ ಒಂದೇ ಭಾಷೆ ಎಂಬುದು ಭಾರತಕ್ಕಷ್ಟೇ ಅಲ್ಲ ಯಾವುದೇ ದೇಶದ ಏಕತೆ ಹಾಗೂ ಅಭಿವೃದ್ದಿಗೆ ಒಳ್ಳೆಯದಲ್ಲ ಎಂದಿದ್ದಾರೆ. ನಮ್ಮ ದೇಶದಲ್ಲಿ ಯಾವುದೋ ಒಂದು ಭಾಷೆಯನ್ನು ಹೇರುವುದು ಸಾಧ್ಯವಿಲ್ಲ ಎಂದಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ರಜನಿಕಾಂತ್ ಮಾತನಾಡುತ್ತಾ ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ‘ಹಿಂದಿ ರಾಷ್ಟ್ರಭಾಷೆ’ ವಾದಕ್ಕೆ ಕಮಲ್ ಹಾಸನ್ ತಿರುಗೇಟು: ‘ಯಾವುದೇ ಶಾಗೆ ಅಧಿಕಾರವಿಲ್ಲ’ವಂತೆ!

ಮುಖ್ಯವಾಗಿ ಹಿಂದಿಯನ್ನು ಹೇರಿದರೆ, ತಮಿಳುನಾಡಿನಲ್ಲಷ್ಟೇ ಅಲ್ಲ, ಯಾವುದೇ ದಕ್ಷಿಣದ ರಾಜ್ಯ ಇದನ್ನು ಒಪ್ಪಲ್ಲ. ಉತ್ತರದ ಹಲವಾರು ರಾಜ್ಯಗಳು ಇದನ್ನು ವಿರೋಧಿಸುತ್ತವೆ ಎಂದು ಹಿಂದಿ ಹೇರಿಕೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ ರಜನಿಕಾಂತ್.

ಈ ಹಿಂದೆ ನಟ, ರಾಜಕಾರಣಿ ಕಮಲ್ ಹಾಸನ್ ಸಹ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದರು. "ಭಾರತ ಗಣರಾಜ್ಯವಾದಾಗ ವೈವಿಧ್ಯತೆಯಲ್ಲಿ ಏಕತೆ ಎಂಬ ಭರವಸೆ ನೀಡಲಾಗಿದೆ. ಶಾ, ಸುಲ್ತಾನ್ ಅಥವಾ ಯಾವುದೇ ಸಾಮ್ರಾಟ್‍ರಿಂದ ಆ ಭರವಸೆಯನ್ನು ಹಿಂಪಡೆಯಲು ಸಾಧ್ಯವಿಲ್ಲ" ಎಂದಿದ್ದಾರೆ.

ಒಂದು ದೇಶ, ಒಂದೇ ಭಾಷೆ ಎನ್ನುವಂತಹ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಸಹ ಸಿಡಿದೆದ್ದಿದ್ದರು. ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌