ಆ್ಯಪ್ನಗರ

ದೇವರ ದರ್ಶನ ಪಡೆದ ಶಿವರಾಜ್‌ಕುಮಾರ್‌

ನಟ ಶಿವರಾಜ್‌ ಕುಮಾರ್‌ ಚಿಕ್ಕಬಳ್ಳಾಪುರದ ಶ್ರೀ ವೀರಾಂಜನೇಯ ಸ್ವಾಮಿಯ ದರ್ಶನ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಪಿಯುಸಿ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Vijaya Karnataka 1 Jun 2018, 12:13 pm
ಶಿವರಾಜ್‌ ಕುಮಾರ್‌ ತಮ್ಮ ಬಿಝಿ ಶೆಡ್ಯೂಲ್‌ ಮಧ್ಯೆ ಇತ್ತೀಚೆಗೆ ಮುಖ್ಯ ಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದರು. ಈಗ ಆದಿ ಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖೆಗೆ ಇತ್ತೀಚೆಗೆ ಭೇಟಿ ನೀಡಿದ್ದಾರೆ. ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜತೆ ಚಿಕ್ಕಬಳ್ಳಾಪುರದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ನಂತರ ಅಗಲಗುರ್ಕಿ ಬಳಿಯ ಬಿಜಿಎಸ್‌ ಪಿಯು ಕಾಲೇಜಿನ ಸ್ವಸ್ಥಿ 2018 ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
Vijaya Karnataka Web shivarajkumar1


ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸಾಗಿ ಕಾಲೇಜು ಮೆಟ್ಟಿಲು ಹತ್ತಿರುವ ಯುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬೇಕು. ವಿದ್ಯೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ತಿಳಿ ಹೇಳಿದ್ದಾರೆ.

ಟಗರು ಯಶಸ್ಸಿನ ನಂತರ ಕವಚ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮಲಯಾಳಂ ಚಿತ್ರದ ಕನ್ನಡ ರಿಮೇಕ್‌ ಆಗಿದೆ. ಅವರ ಅಭಿನಯದ ದಿ ವಿಲನ್‌ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಸಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌