ಆ್ಯಪ್ನಗರ

SIIMA 2019 Yash: ಸೈಮಾ ಅತ್ಯುತ್ತಮ ನಟ ಪ್ರಶಸ್ತಿ ಬಾಚಿಕೊಂಡ ರಾಖಿ ಭಾಯ್ ಯಶ್

ಕತಾರ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸೈಮಾ ಪ್ರಶಸ್ತಿ 2019 ಪ್ರಕಟವಾಗಿದ್ದು ಕೆಜಿಫ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಯಶ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಲ್ಲಿದೆ ನೋಡಿ ಕನ್ನಡಕ್ಕೆ ಸಿಕ್ಕ ಪ್ರಶಸ್ತಿಗಳು.

Vijaya Karnataka Web 16 Aug 2019, 12:39 pm
ರಾಕಿಂಗ್ ಸ್ಟಾರ್ ಯಶ್ ಮುಡಿಗೆ ಇನ್ನೊಂದು ಗರಿ ಮೂಡಿದೆ. ಈ ಬಾರಿಯ ಸೈಮಾ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ ಯಶ್. ಕೆಜಿಫ್: ಚಾಪ್ಟರ್ 1 ಸಿನಿಮಾದಲ್ಲಿನ ಅಭಿನಯಕ್ಕಾಗಿ ಈ ಪ್ರಶಸ್ತಿ ಯಶ್‍ರನ್ನು ವರಿಸಿದೆ.
Vijaya Karnataka Web yash1


ಕತಾರ್‌ನಲ್ಲಿ ನಡೆದ ಎಂಟನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸೈಮಾ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಅತ್ಯುತ್ತಮ ನಾಯಕ ನಟ ಪ್ರಶಸ್ತಿಗೆ ಶಿವಣ್ಣ (ಟಗರು) , ಶರಣ್ (ರ‍್ಯಾಂಬೋ 2), ಸತೀಶ್ ನೀನಾಸಂ (ಅಯೋಗ್ಯ) ಹಾಗೂ ಅನಂತ್ ನಾಗ್ (ಸರ್ಕಾರಿ ಹಿ.ಪ್ರಾ. ಶಾಲೆ, ಕಾಸರಗೋಡು) ಸಿನಿಮಾಗಳಿಗಾಗಿ ಈ ನಟರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು.

ಅಂತಿಮವಾಗಿ ಕೆಜಿಎಫ್ ಚಿತ್ರದಲ್ಲಿನ ಅತ್ಯುತ್ತಮ ಅಭಿನಯಕ್ಕಾಗಿ ಯಶ್‌ಗೆ ಸೈಮಾ ಅತ್ಯುತ್ತಮ ಪ್ರಶಸ್ತಿ ಸಿಕ್ಕಿದೆ. ಪ್ರಶಾಂತ್ ನೀಲ್ ಅವರಿಗೆ ಕೆಜಿಎಫ್ ನಿರ್ದೇಶನಕ್ಕಾಗಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿದೆ.

ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಸಿನಿಮಾದಲ್ಲಿನ ಅಭಿನಯಕ್ಕಾಗಿ ಪ್ರಕಾಶ್ ಥುಮಿನರ್ ಅತ್ಯುತ್ತಮ ಹಾಸ್ಯ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಟಗರು ಚಿತ್ರದಲ್ಲಿನ ಡಾಲಿ ಪಾತ್ರಕ್ಕಾಗಿ ಅತ್ಯುತ್ತಮ ಖಳನಟ ಪ್ರಶಸ್ತಿ ಧನಂಜಯ್ ಪಾಲಾಗಿದೆ.

ಕೆಜಿಫ್ ಚಿತ್ರದಲ್ಲಿ ತಾಯಿ ಪಾತ್ರ ಪೋಷಿಸಿರುವ ಅರ್ಚನಾ ಮುಡಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಲಭಿಸಿದೆ. ಅಯೋಗ್ಯ ನಿರ್ದೇಶಕ ಮಹೇಶ್ ಕುಮಾರ್ ಅತ್ಯುತ್ತಮ ಡೆಬ್ಯು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಆ ಕರಾಳ ರಾತ್ರಿ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅತ್ಯುತ್ತಮ ಡೆಬ್ಯು ನಟಿಯಾಗಿ ಆಯ್ಕೆಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌