ಆ್ಯಪ್ನಗರ

ಉಪ್ಪಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌!

ರಿಯಲ್‌ ಸ್ಟಾರ್‌ ಉಪೇಂದ್ರ ನಿರ್ದೇಶನ ಮಾಡ್ತಾರೆ ಅಂದ್ರೆ ಅವರ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

ಟೈಮ್ಸ್ ಆಫ್ ಇಂಡಿಯಾ 16 Feb 2017, 10:57 am
ರಿಯಲ್‌ ಸ್ಟಾರ್‌ ಉಪೇಂದ್ರ ನಿರ್ದೇಶನ ಮಾಡ್ತಾರೆ ಅಂದ್ರೆ ಅವರ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಕಳೆದ ಬಾರಿ 'ಉಪ್ಪಿ 2' ಚಿತ್ರವನ್ನು ನಿರ್ದೇಶಿಸಿದ್ದ ಉಪೇಂದ್ರ, ಈಗ ಮತ್ತೆ ಡೈರೆಕ್ಟರ್‌ ಕ್ಯಾಪ್‌ ಧರಿಸಲು ತಯಾರಿ ನಡೆಸಿದ್ದಾರೆ.
Vijaya Karnataka Web upendra to direct his 50th film
ಉಪ್ಪಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌!


ಕಳೆದ ಕೆಲವು ತಿಂಗಳಿಂದ ಉಪೇಂದ್ರ ಅಭಿನಯದ 50ನೇ ಚಿತ್ರವನ್ನು ಅವರ ಅಭಿಮಾನಿಯಾಗಿರೋ ಮಂಜು ಮಾಂಡವ್ಯ ನಿರ್ದೇಶಿಸಲಿದ್ದಾರೆ ಎಂಬ ಸುದ್ದಿ ಹರಡಿತ್ತು. 'ಮಾಸ್ಟರ್‌ ಪೀಸ್‌' ಖ್ಯಾತಿಯ ನಿರ್ದೇಶಕ ಮಂಜು ಮಾಂಡವ್ಯ ಉಪ್ಪಿ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದು ನಿಜ, ಆದರೆ ಅದು 50ನೇ ಚಿತ್ರವಲ್ಲ. ಸ್ವತಃ ಉಪ್ಪಿ ತಮ್ಮ 50ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಕುತೂಹಲಕಾರಿ ಸಂಗತಿ.

ಈಗಾಗಲೇ ಉಪ್ಪಿ 15 ದಿನಗಳಿಂದ ಚಿತ್ರದ ಸ್ಕ್ರಿಪ್ಟ್‌ ತಯಾರಿಯಲ್ಲಿ ತೊಡಗಿಕೊಂಡಿದ್ದಾರಂತೆ. ಮುಂದಿನ ದಿನಗಳಲ್ಲಿ ಚಿತ್ರದ ಟೈಟಲ್‌ ಹೊರಬೀಳಲಿದೆ. ಸದ್ಯಕ್ಕೆ ಉಪೇಂದ್ರ, 'ಉಪ್ಪಿ ಮತ್ತೆ ಹುಟ್ಟಿ ಬಾ- ಇಂತಿ ಪ್ರೇಮಾ' ಚಿತ್ರದ ಶೂಟಿಂಗ್‌ ಪೂರ್ಣಗೊಳಿಸಿದ್ದಾರೆ. ಇಷ್ಟೇ ಅಲ್ಲದೆ ನಿರ್ದೇಶಕ ಶಶಾಂಕ್‌ ಜತೆಗೂ ಚಿತ್ರವೊಂದರ ಸಿದ್ಧತೆಯಲ್ಲಿ ತೊಡಗಿದ್ದಾರಂತೆ ಉಪ್ಪಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌