ಆ್ಯಪ್ನಗರ

Puneeth Rajkumar: ಅಪ್ಪು ಸಮಾಧಿ ಸ್ಥಳ ಅಭಿವೃದ್ಧಿ: ರಾಜ್ ಕುಟುಂಬದಿಂದ ಸಿಎಂ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ನಟ, ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ ಡಾ.ರಾಜ್ ಕುಮಾರ್ ಕುಟುಂಬದ ಸದಸ್ಯರು ಭೇಟಿ ಮಾಡಿದರು.

Authored byಹರ್ಷಿತಾ ಎನ್ | Vijaya Karnataka Web 17 Aug 2022, 7:24 pm

ಹೈಲೈಟ್ಸ್‌:

  • ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್ ಸಮಾಧಿ
  • ಡಾ.ರಾಜ್, ಪಾರ್ವತಮ್ಮ, ಅಪ್ಪು ಸಮಾಧಿ ಅಭಿವೃದ್ಧಿಗೆ ಯೋಜನೆ
  • ಸಿಎಂ ಜೊತೆ ಮಾತುಕತೆ ನಡೆಸಿದ ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ashwini puneeth rajkumar and raghavendra rajkumar meets cm basavaraj bommai
Puneeth Rajkumar: ಅಪ್ಪು ಸಮಾಧಿ ಸ್ಥಳ ಅಭಿವೃದ್ಧಿ: ರಾಜ್ ಕುಟುಂಬದಿಂದ ಸಿಎಂ ಭೇಟಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ನಟ, ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ ಡಾ.ರಾಜ್ ಕುಮಾರ್ ಕುಟುಂಬದ ಸದಸ್ಯರು ಭೇಟಿ ಮಾಡಿದರು.
ಬೆಂಗಳೂರಿನ ರೇಸ್‌ ಕೋರ್ಸ್ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತುಕತೆ ನಡೆಸಿದರು. ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್ ಕುಮಾರ್ ಸಮಾಧಿ ಅಭಿವೃದ್ಧಿ, ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ ಅಭಿವೃದ್ಧಿ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಸಮಾಧಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ಯೋಜನೆಯ ಪಿಪಿಟಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಯುವ ರಾಜ್‌ಕುಮಾರ್ ಕೂಡ ಇದ್ದರು.

ಒಂದೇ ದಿನ ಒಂದು ಲಕ್ಷಕ್ಕೂ ಅಧಿಕ ಮಂದಿಯಿಂದ ಅಪ್ಪು ಪುಣ್ಯಭೂಮಿ ದರ್ಶನ..!

ಮತ್ತೊಂದು ಸುತ್ತಿನ ಸಭೆ
ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್‌ ಕುಮಾರ್, ಪುನೀತ್ ರಾಜ್‌ಕುಮಾರ್ ಮತ್ತು ಪಾರ್ವತಮ್ಮ ರಾಜ್‌ಕುಮಾರ್ ಅವರ ಸಮಾಧಿಯಿದ್ದು, ಇದನ್ನ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸಲಾಗಿದೆ. ಯೋಜನೆಯ ರೂಪುರೇಷೆ ತಯಾರಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಡಾ.ರಾಜ್ ಕುಟುಂಬದ ಸದಸ್ಯರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ.

ಪುನೀತ್‌ ಸಮಾಧಿ ದರ್ಶನಕ್ಕೆ 500 ಕಿ.ಮಿ ದೂರದಿಂದ ಓಡೋಡಿ ಬರುತ್ತಿದ್ದಾರೆ ಕ್ರೀಡಾಪಟು: ಧಾರವಾಡದ ದಾಕ್ಷಾಯಿಣಿಯ ವಿಶೇಷ ಅಭಿಮಾನ

ಪುನೀತ್ ರಾಜ್‌ಕುಮಾರ್ ನಿಧನ
ಕಳೆದ ವರ್ಷದ ಅಕ್ಟೋಬರ್ 29 ರಂದು ಕನ್ನಡ ನಟ ಪುನೀತ್ ರಾಜ್‌ಕುಮಾರ್ ವಿಧಿವಶರಾದರು. ಹೃದಯಾಘಾತ ಹಾಗೂ ಹೃದಯಸ್ತಂಭನದಿಂದ ಪುನೀತ್ ರಾಜ್‌ಕುಮಾರ್ ಕೊನೆಯುಸಿರೆಳೆದರು. ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಜನ ಆಗಮಿಸಿದ್ದರು. ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್‌ಕುಮಾರ್ ಅವರ ಸಮಾಧಿ ವೀಕ್ಷಿಸಲು ಈಗಲೂ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ.

Puneeth Rajkumar: ಇನೋವಾ ಕಾರ್‌ನಲ್ಲಿ ಹಾವೇರಿ ತಲುಪಲಿರುವ ಪುನೀತ್ ರಾಜ್‌ಕುಮಾರ್ ಸಮಾಧಿಯಲ್ಲಿ ಹಚ್ಚಿದ ದೀಪ

ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರ ಸಮಾಧಿಯ ಪಕ್ಕದಲ್ಲೇ ಪುನೀತ್ ರಾಜ್‌ಕುಮಾರ್ ಅವರ ಸಮಾಧಿ ಇದೆ.
ಲೇಖಕರ ಬಗ್ಗೆ
ಹರ್ಷಿತಾ ಎನ್
ವಿಜಯ ಕರ್ನಾಟಕ ಆನ್‌ಲೈನ್‌ನಲ್ಲಿ 2021ರ ಮಾರ್ಚ್‌ನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2011ರಿಂದ ಮಾಧ್ಯಮ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಸುದ್ದಿ ವಾಹಿನಿಗಳು ಹಾಗೂ ಡಿಜಿಟಲ್ ಮೀಡಿಯಾಗಳಲ್ಲಿ ಸಿನಿಮಾ ವರದಿಗಾರ್ತಿಯಾಗಿ ಕೆಲಸ ಮಾಡಿದ ಅನುಭವ ಇವರಿಗೆ ಇದೆ. ಸಿನಿಮಾ ವರದಿಗಾರಿಕೆ ಇವರ ಪ್ರಮುಖ ಆಸಕ್ತಿ ವಿಭಾಗ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌