ಆ್ಯಪ್ನಗರ

ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ ರಜಿನಿಕಾಂತ್

ಕಾಲಿವುಡ್‌ನ ಸೂಪರ್ ಸ್ಟಾರ್ ರಜಿನಿಕಾಂತ್ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಜಿನಿಕಾಂತ್ 50 ಲಕ್ಷ ರೂಪಾಯಿ ಕೊಟ್ಟಿದ್ದಾರೆ.

Agencies 17 May 2021, 1:53 pm

ಹೈಲೈಟ್ಸ್‌:

  • 50 ಲಕ್ಷ ರೂಪಾಯಿ ದೇಣಿಗೆ ನೀಡಿದ ಸೂಪರ್ ಸ್ಟಾರ್ ರಜಿನಿಕಾಂತ್
  • ಸಿಎಂ ಪರಿಹಾರ ನಿಧಿಗೆ ದೇಣಿಗೆ ಕೊಟ್ಟ ರಜಿನಿಕಾಂತ್
  • ಇಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ರನ್ನು ಭೇಟಿ ಮಾಡಿ ಚೆಕ್ ಹಸ್ತಾಂತರಿಸಿದ ರಜಿನಿಕಾಂತ್

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web super star rajinikanth donates 50 lakh to cm covid relief fund
ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ ರಜಿನಿಕಾಂತ್
ಕಾಲಿವುಡ್‌ನ ಸೂಪರ್ ಸ್ಟಾರ್ ರಜಿನಿಕಾಂತ್ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಜಿನಿಕಾಂತ್ 50 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿ ಮಾಡಿದ ನಟ ರಜಿನಿಕಾಂತ್, 50 ಲಕ್ಷ ರೂಪಾಯಿಯ ಚೆಕ್‌ಅನ್ನು ಹಸ್ತಾಂತರಿಸಿದರು.
ಒಂದು ಕೋಟಿ ರೂಪಾಯಿ ದೇಣಿಗೆ ಕೊಟ್ಟಿದ್ದ ಪುತ್ರಿ ಸೌಂದರ್ಯ ರಜಿನಿಕಾಂತ್ ತಮಿಳುನಾಡಿನಲ್ಲಿ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸಲು ಸಕಲ ವ್ಯವಸ್ಥೆ ರೂಪಿಸಲು ಇತ್ತೀಚೆಗಷ್ಟೇ ರಜಿನಿಕಾಂತ್ ಪುತ್ರಿ ಸೌಂದರ್ಯ ರಜಿನಿಕಾಂತ್, ಪತಿ ವಿಷಗನ್ ಮತ್ತು ಕುಟುಂಬ ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದರು.

ಎರಡು ಡೋಸ್ ಲಸಿಕೆ ಪಡೆದಿದ್ದ ರಜಿನಿಕಾಂತ್
'ಅಣ್ಣಾತ್ತೆ' ಶೂಟಿಂಗ್ ಮುಗಿಸಿ ವಾಪಸ್ ಬಂದ ಬಳಿಕ ಸೂಪರ್ ಸ್ಟಾರ್ ರಜಿನಿಕಾಂತ್ ಕೊರೊನಾ ವೈರಸ್ ಲಸಿಕೆ ಪಡೆದಿದ್ದರು. ಈಗಾಗಲೇ, ಲಸಿಕೆಯ ಎರಡೂ ಡೋಸ್‌ಗಳನ್ನು ರಜಿನಿಕಾಂತ್ ಪಡೆದಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡಿದ ತಮಿಳು ನಟ ಸೂರ್ಯ ಕುಟುಂಬ
ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿರುವ ಸ್ಟಾರ್‌ಗಳು
ತಮಿಳುನಾಡು ಜನರಿಗೆ ಸಹಕಾರಿಯಾಗುವಂತೆ ಚಿಕಿತ್ಸೆ ಮತ್ತು ವೈದ್ಯಕೀಯ ಸೌಲಭ್ಯಗಳು ಸಕಲರಿಗೂ ಸಿಗುವ ನಿಟ್ಟಿನಲ್ಲಿ ವ್ಯವಸ್ಥೆ ರಚಿಸಲು ಸಿಎಂ ಪರಿಹಾರ ನಿಧಿಗೆ ಸೂರ್ಯ-ಕಾರ್ತಿ ಕುಟುಂಬ ಒಂದು ಕೋಟಿ ರೂಪಾಯಿ, ನಟ ಅಜಿತ್ 25 ಲಕ್ಷ ರೂಪಾಯಿ, ನಟ ಶಿವಕಾರ್ತಿಕೇಯನ್ 25 ಲಕ್ಷ ರೂಪಾಯಿ, ಜಯಂ ರವಿ ಮತ್ತು ತಂದೆ 10 ಲಕ್ಷ ರೂಪಾಯಿ, ನಿರ್ದೇಶಕ ಎ.ಆರ್.ಮುರುಗದಾಸ್ 25 ರೂಪಾಯಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌