ಆ್ಯಪ್ನಗರ

Trivikrama: 'ಕ್ರೇಜಿ ಸ್ಟಾರ್' ರವಿಚಂದ್ರನ್ ಪುತ್ರ ವಿಕ್ರಮ್ ಬೆಳ್ಳಿತೆರೆಗೆ ಎಂಟ್ರಿ ನೀಡಲು ಡೇಟ್ ಫಿಕ್ಸ್‌

'ಕ್ರೇಜಿ ಸ್ಟಾರ್' ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್‌ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಇದೇ ಜೂನ್ 24ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಆ ವಿಚಾರವನ್ನು ಹಂಚಿಕೊಳ್ಳುವುದಕ್ಕೆ ಚಿತ್ರತಂಡ ಮಾಧ್ಯಮಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ನಿರ್ದೇಶಕರಾದ 'ಯುವರತ್ರ' ಖ್ಯಾತಿಯ ಸಂತೋಷ್ ಆನಂದ್‌ರಾಮ್, 'ಭರ್ಜರಿ' ಚೇತನ್‌ಕುಮಾರ್, ನಟ ಶರಣ್, ಹಿರಿಯ ನಟಿ ತಾರಾ, ಸಾಧು ಕೋಕಿಲ ಸೇರಿದಂತೆ ಅನೇಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಚಿತ್ರದ ಹೀರೋ ವಿಕ್ರಮ್ ರವಿಚಂದ್ರನ್ ಹೇಳಿದ್ದೇನು? ಇಲ್ಲಿದೆ ಮಾಹಿತಿ.

Authored byಅವಿನಾಶ್ ಜಿ. ರಾಮ್ | Vijaya Karnataka Web 11 May 2022, 5:06 pm

ಹೈಲೈಟ್ಸ್‌:

  • ವಿಕ್ರಮ್ ರವಿಚಂದ್ರನ್ ಹೀರೋ ಆಗಿರುವ 'ತ್ರಿವಿಕ್ರಮ' ಸಿನಿಮಾ
  • 'ತ್ರಿವಿಕ್ರಮ' ಸಿನಿಮಾದ ರಿಲೀಸ್ ಡೇಟ್ ಫಿಕ್ಸ್
  • ಚಿತ್ರದ ಬಗ್ಗೆ ಹೀರೋ ವಿಕ್ರಮ್ ರವಿಚಂದ್ರನ್ ಹೇಳಿದ್ದೇನು?
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Virkam
'ಕ್ರೇಜಿ ಸ್ಟಾರ್' ರವಿಚಂದ್ರನ್ ಅವರ 2ನೇ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ 'ತ್ರಿವಿಕ್ರಮ' ಚಿತ್ರವು ಜೂನ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಬಿಡುಗಡೆ ಘೋಷಣೆ ಮಾಡಲು ಚಿತ್ರತಂಡ ಈಚೆಗೆ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಹಿರಿಯ ನಟಿ ತಾರಾ, ನಟರಾದ ಮನೋರಂಜನ್ ರವಿಚಂದ್ರನ್, ಸಾಧು ಕೋಕಿಲ, ಶರಣ್, ಆದಿ ಲೋಕೇಶ್, ನಿರ್ದೇಕರಾದ ಶಿವಮಣಿ, ಸಂತೋಷ್ ಆನಂದರಾಮ್, 'ಭರ್ಜರಿ' ಚೇತನ್ ಕುಮಾರ್ ಮುಂತಾದ ಗಣ್ಯರು ಪತ್ರಿಕಾಗೋಷ್ಠಿಗೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.
ಶಿವಣ್ಣ ಮತ್ತು ಅಪ್ಪು ಸರ್‌ಗೆ ಈ ಸಿನಿಮಾದ ಕಥೆ ಗೊತ್ತು!
ಚಿತ್ರದ ಬಗ್ಗೆ ಮಾತನಾಡಿದ ನಟ ವಿಕ್ರಮ್ ರವಿಚಂದ್ರನ್, 'ನಮ್ಮ ಚಿತ್ರ ಸಂಪೂರ್ಣವಾಗಿ ಮೂರು ವರ್ಷವಾಯಿತು. ಕೋವಿಡ್ ಕಾರಣದಿಂದ ತಡವಾಯಿತು. ಈ ಸಮಯದಲ್ಲಿ ನಾನು ಪುನೀತ್ ರಾಜ್‌ಕುಮಾರ್ ಸರ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ಈ ಚಿತ್ರದ ಕಥೆ ಅವರಿಗೆ ಹೇಳಿದ್ದೆ. ಕಥೆ ಕೇಳಿ ಖುಷಿ ಪಟ್ಟಿದ್ದರು. 'ನಾನು ಒಂದು ಹಾಡು ಹಾಡುತ್ತೀನಿ, ನೀನು ಚೆನ್ನಾಗಿ ಡ್ಯಾನ್ಸ್ ಮಾಡಬೇಕು. ಇಲ್ಲದಿದ್ದರೆ ಹೊಡೀತಿನಿ..' ಅಂತ ಪ್ರೀತಿಯಿಂದ ಹೇಳಿದ್ದರು. ಅವರು ನಮ್ಮೊಂದಿಗೆ ಇಲ್ಲ ಅಂತ ನಾನು ಹೇಳಲ್ಲ. ಅವರು ಇಲ್ಲೇ ಇದ್ದಾರೆ. ಈ ಚಿತ್ರದ ಕಥೆ ನನ್ನ ತಂದೆಗೂ ಪೂರ್ತಿ ಹೇಳಿಲ್ಲ. ಆದರೆ ಶಿವಣ್ಣ ಮತ್ತು ಪುನೀತ್‌ ಸರ್‌ಗೆ ಕಥೆ ಗೊತ್ತಿದೆ. ನಾನು ರವಿಚಂದ್ರನ್ ಅವರ ಮಗ ಹೌದು. ಆದರೆ ಚಿತ್ರರಂಗಕ್ಕೆ ನಟನಾಗಿ ಹೊಸಬ. ನಮ್ಮ ಚಿತ್ರವನ್ನು ನೋಡಿ ಹಾರೈಸಿ. ಅವಕಾಶ ನೀಡಿದ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಧನ್ಯವಾದ' ಎಂದರು.

ಚಿತ್ರದ ಬಗ್ಗೆ ನಿರ್ದೇಶಕರು ಹೇಳಿದ್ದೇನು?
'ವಿಕ್ರಮ್ ಅವರ ನಟನೆಗೆ ನೂರಕ್ಕೆ ಸಾವಿರ ಅಂಕ ಕೊಡಬಹುದು. ಮಧ್ಯಮರ್ಗದ ಹುಡುಗನಾಗಿ ವಿಕ್ರಮ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಮಿಡಲ್ ಕ್ಲಾಸ್ ಫ್ಯಾಮಿಲಿ ಹುಡುಗ, ಹೈ ಕ್ಲಾಸ್ ಫ್ಯಾಮಿಲಿ ಹುಡುಗಿಯನ್ನು ಏಕೆ ಲವ್ ಮಾಡಬಾರದು ಎಂಬ ವಿಷಯವನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದೇನೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಅಮ್ಮನ ಕುರಿತಾದ ಹಾಡು ಈಗಾಗಲೇ ಜನಮನ ಗೆದ್ದಿದೆ. ಈಚಿತ್ರಕ್ಕೆ ನಿರ್ಮಾಪಕ ಸೋಮಣ್ಣನವರ ಸಹಕಾರ ಅಪಾರ. ಜೂನ್ 24 ಚಿತ್ರ ತೆರೆಗೆ ಬರಲಿದೆ. ಇದು ನನ್ನ ಮೂರನೇ ಚಿತ್ರ' ಎಂದು ನಿರ್ದೇಶಕ ಸಹನಾಮೂರ್ತಿ ಹೇಳಿದರು. ಈ ಹಿಂದೆ ಅವರು 'ರೋಸ್' ಮತ್ತು 'ಲೀಡರ್' ಸಿನಿಮಾಗಳನ್ನು ಮಾಡಿದ್ದರು.

ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ 'ತ್ರಿವಿಕ್ರಮ' ಸಿನಿಮಾದ ಆಡಿಯೋ ಹಕ್ಕುಗಳಿಗೆ ಬಂತು ಒಳ್ಳೆಯ ಬೆಲೆ!
'ನಿರ್ದೇಶಕ ಸಹನಾಮೂರ್ತಿ ನನ್ನ ಸ್ನೇಹಿತ. ಆತ ಈ ಚಿತ್ರದ ಕಥೆ ಸಿದ್ದಮಾಡಿಕೊಂಡು ಅನೇಕರ ಹತ್ತಿರ ಹೇಳುತ್ತಿದ್ದ. ಕೊನೆಗೆ‌ ನಾನು ಕೇಳಿದೆ. ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ಹಾಗಾಗಿ ನಾನು ಸಿನಿಮಾ ಮಾಡಲು ಒಪ್ಪಿಕೊಂಡೆ. 2019ರಲ್ಲಿ ಈ ಸಿನಿಮಾ ಆರಂಭವಾಯಿತು. ಅಪ್ಪು ಸರ್ ಬಂದು ಕ್ಲ್ಯಾಪ್ ಮಾಡಿದ್ದರು. ಚಿತ್ರದ ಎಲ್ಲಾ ಇವೆಂಟ್‌ಗಳಿಗೂ ಬರುವ ಭರವಸೆ ನೀಡಿದ್ದರು. ಆದರೆ ವಿಧಿಲಿಖಿತವೇ ಬೇರೆಯಾಗಿತ್ತು. ಈ ಸಮಯದಲ್ಲಿ ಅವರನ್ನು ನೆನಪಿಸಿಕೊಳ್ಳುತ್ತೇನೆ' ಎಂದರು ನಿರ್ಮಾಪಕ ಸೋಮಣ್ಣ.

'ಕೊರೊನಾ ವೈರಸ್‌ನಿಂದ ಅದೃಷ್ಟದಿಂದ ಪಾರಾದೆ': ರವಿಚಂದ್ರನ್ ಪುತ್ರ ವಿಕ್ರಮ್!
'ಈ ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಅಭಿನಯಿಸುವಾಗ ವಿಕ್ರಮ್ ಸರ್ ಸಾಕಷ್ಟು ಸಹಾಯ ಮಾಡಿದರು' ಎಂದು ನಾಯಕಿ ಆಕಾಂಕ್ಷ ಶರ್ಮಾ ತಿಳಿಸಿದರು. 'ವಿಕ್ಕಿ ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯದಾಗಲಿ' ಎಂದರು ನಟ ಸಾಧು ಕೋಕಿಲ.
ಲೇಖಕರ ಬಗ್ಗೆ
ಅವಿನಾಶ್ ಜಿ. ರಾಮ್
'ವಿಜಯ ಕರ್ನಾಟಕ' ಡಿಜಿಟಲ್ ವಿಭಾಗದಲ್ಲಿ 2019ರ ಸೆಪ್ಟೆಂಬರ್‌ನಿಂದ ಪತ್ರಕರ್ತನಾಗಿ ಅವಿನಾಶ್ ಜಿ. ರಾಮ್ ಕೆಲಸ ಮಾಡುತ್ತಿದ್ದಾರೆ. ಚಿನ್ನದ ಪದಕದೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರಿಗೆ ಕಳೆದ 10 ವರ್ಷಗಳಿಂದ ಸಿನಿಮಾ ವರದಿಗಾರರಾಗಿ ಕೆಲಸ ಮಾಡಿದ ಅನುಭವವಿದೆ. ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ನಾಲ್ಕು ವರ್ಷ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಅವಿನಾಶ್‌ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ವರದಿಗಾರಿಕೆ ಜೊತೆಗೆ ಪ್ರವಾಸ, ಓದು, ಸಂಗೀತ ಕೇಳುವುದು ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌