ಆ್ಯಪ್ನಗರ

ಪರಮೇಶ್ವರ್‌ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಪಟ್ಟ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರ ಪಟ್ಟ ಜಿ. ಪರಮೇಶ್ವರ್‌ ಅವರ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ಗೃಹಸಚಿವ ಸ್ಥಾನವನ್ನು ತೊರೆಯುವಂತೆ ಅವರಿಗೆ ಪಕ್ಷದ ಹೈಕಮಾಂಡ್‌ ಸೂಚಿಸಿದೆ. ಪಕ್ಷದ ಉನ್ನತ ಮೂಲಗಳು ಇದನ್ನು ತಿಳಿಸಿದ್ದು, ಅಧಿಕೃತ ಪ್ರಕಟಣೆಯಷ್ಟೇ ಬಾಕಿಯಿದೆ.

ವಿಕ ಸುದ್ದಿಲೋಕ 29 May 2017, 8:03 pm
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರ ಪಟ್ಟ ಜಿ. ಪರಮೇಶ್ವರ್‌ ಅವರ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ಗೃಹಸಚಿವ ಸ್ಥಾನವನ್ನು ತೊರೆಯುವಂತೆ ಅವರಿಗೆ ಪಕ್ಷದ ಹೈಕಮಾಂಡ್‌ ಸೂಚಿಸಿದೆ. ಪಕ್ಷದ ಉನ್ನತ ಮೂಲಗಳು ಇದನ್ನು ತಿಳಿಸಿದ್ದು, ಅಧಿಕೃತ ಪ್ರಕಟಣೆಯಷ್ಟೇ ಬಾಕಿಯಿದೆ.
Vijaya Karnataka Web g parameshwar will continue as kpcc president
ಪರಮೇಶ್ವರ್‌ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಪಟ್ಟ


ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮಾತ್ರ ಬಾಕಿಯಿದ್ದು, ದಲಿತರಿಗೆ ನಾಯಕತ್ವ ನೀಡಬೇಕೆಂಬ ಕೂಗಿನ ಹಿನ್ನೆಲೆಯಲ್ಲಿ ಪರಮೇಶ್ವರ್‌ ಅವರನ್ನೇ ಅಧ್ಯಕ್ಷರಾಗಿ ಮುಂದುವರಿಸಲು ಹೈಕಮಾಂಡ್‌ ನಿರ್ಧರಿಸಿದೆ.

ಹೊಸದಿಲ್ಲಿಯಲ್ಲಿ ಸೋಮವಾರ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖ ನಡೆದ ಮಹತ್ವದ ಸಭೆಯಲ್ಲಿ ಹೈಕಮಾಂಡ್‌ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಗೃಹಸಚಿವ ಪರಮೇಶ್ವರ್‌, ಇಂಧನ ಸಚಿವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಉಪಾಧ್ಯಕ್ಷ ದಿನೇಶ್‌ ಗುಂಡೂರಾವ್, ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ