ಆ್ಯಪ್ನಗರ

ರಾಜ್ಯದಲ್ಲಿ ಪ್ರವಾಹ: ಬ್ಯಾಂಕ್‌, ಎಲ್‌ಐಸಿ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆ ಬ್ಯಾಂಕ್‌, ಎಲ್‌ಐಸಿ ನೇಮಕಾತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆ ದಿನಾಂಕ ಮತ್ತು ಮುಂದೂಡಲಾದ ಪರೀಕ್ಷೆ ಬಗೆಗಿನ ಮಾಹಿತಿ ಇಲ್ಲಿದೆ.

Vijaya Karnataka 12 Aug 2019, 9:38 am
ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್‌ 10 ಮತ್ತು 11ರಂದು ನಡೆಯಬೇಕಾಗಿದ್ದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.
Vijaya Karnataka Web Exam


ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ)ಕ್ಲರಿಕಲ್‌ ಕೇಡರ್‌ನ ಜೂನಿಯರ್‌ ಅಸೋಸಿಯೇಟ್‌ ಹುದ್ದೆಗಳ ನೇಮಕಕ್ಕೆ ಆ.10ರಂದು ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿದ್ದು, ಸದ್ಯವೇ ಪರೀಕ್ಷೆಯ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಇದರೊಂದಿಗೆ ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಕೇರಳದ ಎಲ್ಲ ಪರೀಕ್ಷಾ ಕೇಂದ್ರಗಳ ಪೂರ್ವಭಾವಿ ಪರೀಕ್ಷೆಯನ್ನೂ ಮುಂದೂಡಲಾಗಿದೆ. ರಾಜ್ಯದ ಉಳಿದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಂತೆ ನಡೆದಿದೆ.

ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಅಪ್ರೆಂಟಿಸ್‌ ಡೆವಲಪ್‌ಮೆಂಟ್‌ ಆಫೀಸರ್‌ (ಎಡಿಒ) ನೇಮಕಕ್ಕೆ ಬೆಳಗಾವಿ ಮತ್ತು ಧಾರವಾಡದಲ್ಲಿ ನಡೆಸಬೇಕಿದ್ದ ಮುಖ್ಯ ಪರೀಕ್ಷೆಯನ್ನೂ ಮುಂದೂಡಿದೆ. ಮುಂದೆ ಪರೀಕ್ಷೆ ನಡೆಯುವ ದಿನಾಂಕವನ್ನು ತಿಳಿಸಲಾಗುವುದು ಎಂದು ಎಲ್‌ಐಸಿ ತಿಳಿಸಿದೆ. ಇದರೊಂದಿಗೆ ಕೇರಳ ರಾಜ್ಯದ ವಿವಿಧ ಕೇಂದ್ರಗಳಲ್ಲಿ , ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಬೇಕಾಗಿದ್ದ ಪರೀಕ್ಷೆಯನ್ನೂ ಮುಂದೂಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ