ಆ್ಯಪ್ನಗರ

ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲಿ 809 ಶಿಕ್ಷಕರ ಹುದ್ದೆ

ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲಿ ಸುಮಾರು 800 ಶಿಕ್ಷಕರ ಹುದ್ದೆಗಳು ಸೇರಿದಂತೆ ಒಟ್ಟು 1,748 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ರಮೇಶ್‌ ಪೋಖ್ರಿಯಾಲ್‌ ತಿಳಿಸಿದ್ದಾರೆ.

TOI.in 24 Jun 2019, 3:28 pm
ಹೊಸದಿಲ್ಲಿ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಅನುದಾನಿತ ಸಂಸ್ಕೃತ ವಿಶ್ವವಿದ್ಯಾಲಯಗಳಲ್ಲಿ ಸುಮಾರು 800 ಶಿಕ್ಷಕರ ಹುದ್ದೆಗಳು ಸೇರಿದಂತೆ ಒಟ್ಟು 1,748 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
Vijaya Karnataka Web Teacher


ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ರಮೇಶ್‌ ಪೋಖ್ರಿಯಾಲ್‌ ಲೋಕಸಭೆಯಲ್ಲಿ ಸೋಮವಾರ ತಿಳಿಸಿದ್ದಾರೆ. ಖಾಲಿಯಿರುವ ಹುದ್ದೆಗಳಿಗೆ ನೇಮಕ ಮಾಡಲು ಕೇಂದ್ರ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಶೀಘ್ರದಲ್ಲೇ ನೇಮಕಾತಿ ನಡೆಯಲಿದೆ ಎಂದಿದ್ದಾರೆ.

120 ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತ ಭಾಷೆಯನ್ನು ಕಲಿಸಲಾಗುತ್ತದೆ. 15 ಸಂಸ್ಕೃತ ವಿಶ್ವವಿದ್ಯಾಲಯಗಳೇ ಇವೆ. 1000 ಸಾಂಪ್ರದಾಯಿಕ ಸಂಸ್ಕೃತ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಸಂಸ್ಕೃತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಸಚಿವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಸಂಸ್ಕೃತ ಶಿಕ್ಷಕ ಮತ್ತಿತರ ಹುದ್ದೆಗಳ ಆಕಾಂಕ್ಷಿಗಳು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ ಮೇಲೆ ನಿಗಾ ಇರಿಸಬಹುದಾಗಿದೆ. ಎಚ್‌ಆರ್‌ಡಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು https://mhrd.gov.in/ ಕ್ಲಿಕ್‌ ಮಾಡಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ