ಆ್ಯಪ್ನಗರ

ಬಿಡಬ್ಲ್ಯೂಎಸ್‌ಎಸ್‌ಬಿ ಪರೀಕ್ಷೆಯ ಕೀ ಉತ್ತರ ಪ್ರಕಟ

ಬಿಡಬ್ಲ್ಯೂಎಸ್‌ಎಸ್‌ಬಿ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್‌ 12 ಕೊನೆಯ ದಿನವಾಗಿರುತ್ತದೆ. ವೆಬ್‌ನಲ್ಲಿಯೇ ಆಕ್ಷೇಪಣೆ ಸಲ್ಲಿಸಬಹುದಾಗಿದ್ದು, ಬೇರೆ ರೀತಿಯಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

Vijaya Karnataka Web 6 Apr 2019, 4:14 pm
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್‌ಎಸ್‌ಬಿ) ಗ್ರೂಪ್‌ ಬಿ (ತಾಂತ್ರಿಕ) ಮತ್ತು ಗ್ರೂಪ್‌ ಸಿ (ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗಳ ನೇಮಕಕ್ಕೆ ಮಾರ್ಚ್‌ನಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟಗೊಂಡಿದೆ.
Vijaya Karnataka Web job


ಮಂಡಳಿಯ ಪರವಾಗಿ ಈ ಪರೀಕ್ಷೆಯುನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದು, ತಾತ್ಕಾಲಿಕ ಕೀ ಉತ್ತರವನ್ನು ಕೆಇಎ ವೆಬ್‌ನಲ್ಲಿ ಯೇ ಒದಗಿಸಲಾಗಿದೆ. ಅಭ್ಯರ್ಥಿಗಳು ವಿಷಯವಾರು ಕೀ ಉತ್ತರವನ್ನು ವೆಬ್‌ನಲ್ಲಿ ನೋಡಬಹುದಾಗಿದೆ.

ಈ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಕೂಡ ಅವಕಾಶ ನೀಡಲಾಗಿದ್ದು, ಆಸಕ್ತರು ವೆಬ್‌ನಲ್ಲಿಯೇ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ ಲಿಂಕ್‌ ಒದಗಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಏಪ್ರಿಲ್‌ 12 ಕೊನೆಯ ದಿನವಾಗಿರುತ್ತದೆ. ಬೇರೆ ರೀತಿಯಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಈ ಪರೀಕ್ಷೆ ಮೂಲಕ ಬಿಡಬ್ಲ್ಯೂಎಸ್‌ಎಸ್‌ಬಿಯಲ್ಲಿ ಖಾಲಿ ಇರುವ 270 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ನೋಡಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ