ಆ್ಯಪ್ನಗರ

ಮೈಸೂರಿನಲ್ಲಿ ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕ: ಅರ್ಜಿ ಸಲ್ಲಿಸಲು ಆ.28 ಕೊನೇದಿನ

ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ 70 ಗ್ರಾಮಲೆಕ್ಕಿಗರ ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 30 Jul 2019, 5:00 am
  • ಖಾಲಿ ಹುದ್ದೆಗಳ ಸಂಖ್ಯೆ : 70
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 28, 2019
  • ವೇತನ: 21,400 ರೂ.-42,000 ರೂ.
  • ವಿವರಗಳಿಗೆ ವೆಬ್‌: https://mysore.nic.in
Vijaya Karnataka Web LEAD

ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್‌ 28ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಐದು ಬ್ಯಾಕ್‌ಲಾಗ್‌ ಹುದ್ದೆಗಳೂ ಸೇರಿದಂತೆ ಒಟ್ಟು 70 ಹುದ್ದೆಗಳಿಗೆ ನೇಮಕ ನಡೆಯಲಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ -33 ಹುದ್ದೆ, ಎಸ್‌ಸಿ-9,ಎಸ್‌ಟಿ-2, ಪ್ರವರ್ಗ1-3, ಪ್ರವರ್ಗ2ಎ-12, ಪ್ರವರ್ಗ 3ಎ-4, ಪ್ರವರ್ಗ 3ಬಿ-4 ಹುದ್ದೆಗಳನ್ನು ಮೀಸಲಿಡಲಾಗಿದೆ.

ಅರ್ಹತೆಗಳೇನು?
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು. ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನೂ ಪರಿಗಣಿಸಲಾಗುವುದಿಲ್ಲ . ಅಭ್ಯರ್ಥಿಗಳಿಗೆ ಕಂಪ್ಯೂಟರ್‌ ಜ್ಞಾನ ಕಡ್ಡಾಯ. ಅಭ್ಯರ್ಥಿಯು ಕಂಪ್ಯೂಟರ್‌ ಜ್ಞಾನ ಹೊಂದಿರುವ ಬಗ್ಗೆ ದೃಢೀಕೃತ ಪ್ರಮಾಣ ಪತ್ರ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ. ಸಾಮಾನ್ಯ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 38 ವರ್ಷ ಮತ್ತು ಪ್ರವರ್ಗ-1, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ರೂ. ಪ್ರವರ್ಗ-2ಎ,2ಬಿ, 3ಎ, 3ಬಿರ ಅಭ್ಯರ್ಥಿಗಳಿಗೆ 150ರೂ. ಹಾಗೂ ಸಾಮಾನ್ಯ ವರ್ಗದವರಿಗೆ 300 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ / ಡೆಬಿಟ್‌/ಕ್ರೆಡಿಟ್‌/ ಚಲನ್‌ ಮೂಲಕ ಸ್ಟೇಟ್‌ ಬ್ಯಾಂಕ್‌ ಇಂಡಿಯಾ ಬ್ಯಾಂಕ್‌ ಖಾತೆಗೆ ಜಮಾ ಮಾಡಬಹುದು.

ಇತ್ತ ಗಮನಿಸಿ
  • ಅಭ್ಯರ್ಥಿಯು ಎಲ್ಲಾ ಪ್ರಮಾಣ ಪತ್ರಗಳನ್ನು ಮತ್ತು ಅಂಕಪಟ್ಟಿಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.
  • ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿಯೇ ಮಾಹಿತಿಯನ್ನು ಪಡೆದು ಮೂಲ ದಾಖಲಾತಿಗಳ ಪರಿಶೀಲನೆಗೆ ಹಾಜರಾಗಬೇಕಾಗುತ್ತದೆ.
  • ದ್ವಿತೀಯ ಪಿಯುಸಿ/ ಸಿಬಿಎಸ್‌ಇ/ ಐಸಿಎಸ್‌ಇ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಮೆರಿಟ್‌ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
  • ನೇಮಕಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಮಾತ್ರ ಒದಗಿಸಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ