ಆ್ಯಪ್ನಗರ

ಎಸ್‌ಎಸ್‌ಸಿ ಎಂಟಿಎಸ್‌ ಎಗ್ಸಾಮ್‌: ಕೂಡಲೇ ಅರ್ಜಿ ಸಲ್ಲಿಸಿ ಎಂದು ಆಯೋಗ ಮನವಿ

ಸುಮಾರು 10 ಸಾವಿರ ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂದು ಹೇಳಲಾಗುತ್ತಿರುವುದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸಂಖ್ಯೆ ಕೂಡ ಅಧಿಕವಾಗಿರುವ ಸಾಧ್ಯತೆಗಳಿವೆ. ಹೀಗಾಗಿ ತಾಂತ್ರಿಕ ಸಮಸ್ಯೆ ಸೃಷ್ಟಿಯಾಗಬಹುದೆಂದು ಮೊದಲೇ ಮನಗಂಡಿರುವ ಆಯೋಗ ಕೊನೆಯ ದಿನದವರೆಗೆ ಕಾಯಬೇಡಿ ಎಂದು ಮತ್ತೆ ಮನವಿ ಮಾಡಿಕೊಂಡಿದೆ.

Vijaya Karnataka Web 10 May 2019, 2:11 pm
ಹೊಸದಿಲ್ಲಿ: ಕೇಂದ್ರದ ವಿವಿಧ ಸಚಿವಾಲಯ, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಗ್ರೂಪ್‌ 'ಸಿ' ವೃಂದದ 'ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌' (ಎಂಟಿಎಸ್‌) ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ನೇಮಕಾತಿ ಆಯೋಗ(ಎಸ್‌ಎಸ್‌ಸಿ), ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸಬೇಕೆಂದು ಕೋರಿದೆ.
Vijaya Karnataka Web staff selection commission


ಮೇ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಕೊನೆಯ ದಿನಗಳಲ್ಲಿ ಅರ್ಜಿ ಸಲ್ಲಿಸಲು ಮುಂದಾದಲ್ಲಿ ಸರ್ವರ್‌ ಮೇಲೆ ಒತ್ತಡ ಉಂಟಾಗಿ ತಾಂತ್ರಿಕ ದೋಷ ಕಾಣಿಸಿಕೊಳ್ಳಬಹುದು. ಇದಕ್ಕೆ ಅವಕಾಶವಾಗದಂತೆ ಮೊದಲೇ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಎಸ್‌ಎಸ್‌ಸಿ ಅಧಿಸೂಚನೆ ಪ್ರಕಟಿಸಿದ ನಂತರ ಈ ರೀತಿ ಎರಡನೇ ಬಾರಿ ಮನವಿ ಮಾಡುತ್ತಿದೆ.

ಈ ಬಾರಿ ಸುಮಾರು 10 ಸಾವಿರ ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂದು ಹೇಳಲಾಗುತ್ತಿರುವುದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸಂಖ್ಯೆ ಕೂಡ ಅಧಿಕವಾಗಿರುವ ಸಾಧ್ಯತೆಗಳಿವೆ. ಹೀಗಾಗಿ ತಾಂತ್ರಿಕ ಸಮಸ್ಯೆ ಸೃಷ್ಟಿಯಾಗಬಹುದೆಂದು ಮೊದಲೇ ಮನಗಂಡಿರುವ ಆಯೋಗ ಈ ರೀತಿ ಮನವಿ ಮಾಡಿಕೊಳ್ಳುತ್ತಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ ಪರೀಕ್ಷೆ ಮೂಲಕ ನೇಮಕ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ನೋಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ