ಆ್ಯಪ್ನಗರ

ಸಶಸ್ತ್ರ ಪಡೆಯಲ್ಲಿ ನೇಮಕಾತಿ: ಸಿಎಪಿಎಫ್‌ ಎಸಿ ಪ್ರವೇಶ ಪತ್ರ ಬಿಡುಗಡೆ

ಬಿಎಸ್‌ಎಫ್‌, ಸಿಆರ್‌ಪಿಎಫ್‌, ಸಿಐಎಸ್‌ಎಫ್‌ ಮತ್ತು ಎಸ್‌ಎಸ್‌ಬಿಯಲ್ಲಿ ಖಾಲಿಯಿರುವ 323 ಹುದ್ದೆಗಳಿಗೆ ಯುಪಿಎಸ್‌ಸಿ ನೇಮಕಾತಿ ನಡೆಸುತ್ತಿದ್ದು, ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆಗೊಳಿಸಿದೆ.

TOI.in 24 Jul 2019, 3:29 pm
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಕೇಂದ್ರ ಸಶಸ್ತ್ರ ಪಡೆಯಲ್ಲಿ ಖಾಲಿಯಿರುವ ಸಹಾಯಕ ಕಮಾಂಡೆಂಟ್ಸ್‌ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
Vijaya Karnataka Web Admit Card


ಯುಪಿಎಸ್‌ಸಿ ಸಿಎಪಿಎಫ್‌ ಎಸಿ ಪರೀಕ್ಷೆಯು ಆಗಸ್ಟ್‌ 18, 2019ರಂದು ನಡೆಯಲಿದೆ. ಗಡಿ ಭದ್ರತಾ ಪಡೆ(ಬಿಎಸ್‌ಎಫ್‌), ಕೇಂದ್ರ ಮೀಸಲು ಪೊಲೀಸ್‌ ಪಡೆ(ಸಿಆರ್‌ಪಿಎಫ್‌), ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್‌) ಮತ್ತು ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ)ಯಲ್ಲಿ ಖಾಲಿಯಿರುವ 323 ಹುದ್ದೆಗಳ ಭರ್ತಿಗೆ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಅಭ್ಯರ್ಥಿಗಳು ಇ-ಅಡ್ಮಿಟ್‌ ಕಾರ್ಡ್‌ಅನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಭವಿಷ್ಯದ ಬಳಕೆಗೆ ಪ್ರಿಂಟ್‌ ಪ್ರತಿಯನ್ನು ತೆಗೆದುಕೊಳ್ಳಬಹುದು. ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: upsc.gov.in

ಯುಪಿಎಸ್‌ಸಿ ಸಿಎಪಿಎಫ್‌ ಎಸಿ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಲು ಹೀಗೆ ಮಾಡಿ
1) ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ - upsc.gov.in
2) ಹೋಮ್‌ಪೇಜ್‌ನಲ್ಲಿ ಕಾಣಿಸುವ e-Admit card for CAPF exam 2019' ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
3) ಹೊಸ ಪುಟ ತೆರೆದುಕೊಳ್ಳುತ್ತದೆ.
4) ನಿಮ್ಮ ದಾಖಲಾತಿ ಸಂಖ್ಯೆ, ಜನ್ಮ ದಿನಾಂಕವನ್ನು ನಮೂದಿಸಿ ಲಾಗ್‌ಇನ್‌ ಆಗಿ
5) ನಿಮ್ಮ ಪ್ರವೇಶ ಪತ್ರ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳುತ್ತದೆ.
6) ಅಡ್ಮಿಟ್‌ ಕಾರ್ಡ್‌ಅನ್ನು ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯದ ಬಳಕೆ ಪ್ರಿಂಟ್‌ ಪ್ರತಿ ತೆಗೆದುಕೊಳ್ಳಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ