ಆ್ಯಪ್ನಗರ

ರಾಜ್ಯ ಪೊಲೀಸ್ ಇಲಾಖೆಯಲ್ಲಿ 5 ಸಾವಿರ ಕಾನ್ಸ್‌ಟೇಬಲ್‌, 500 ಪಿಎಸ್‌ಐ ಹುದ್ದೆ ಭರ್ತಿ

ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ, ಅದರಲ್ಲೂ ಪೊಲೀಸ್‌ ಇಲಾಖೆಗೆ ಸೇರಬೇಕು ಎಂದುಕೊಂಡಿರುವ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ.

Vijaya Karnataka Web 16 Jun 2020, 6:48 pm

ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ, ಅದರಲ್ಲೂ ಪೊಲೀಸ್‌ ಇಲಾಖೆಗೆ ಸೇರಬೇಕು ಎಂದುಕೊಂಡಿರುವ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಪೊಲೀಸ್‌ ಇಲಾಖೆಯಲ್ಲಿ 5000 ಪೊಲೀಸ್ ಕಾನ್ಸ್‌ಟೇಬಲ್‌ ಮತ್ತು 500 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿ ಅಗತ್ಯವಿದ್ದು, ನೇಮಕಾತಿಗೆ ಅಧಿಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Vijaya Karnataka Web ksp jobs 2020
ksp jobs 2020


ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ ರವರು, "ರಾಜ್ಯದ ಪೊಲೀಸ್‌ ಇಲಾಖೆಗೆ ಮುಂದಿನ 3 ವರ್ಷಗಳಿಗೆ ಅಗತ್ಯವಾದ ಎಲ್ಲ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ 5 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು 500 ಪಿಎಸ್‌ಐಗಳನ್ನು ನೇಮಕಾತಿ ಮಾಡಲು ಅಧಿಸೂಚಿಸಲಾಗಿದೆ," ಎಂದು ಹೇಳಿದ್ದಾರೆ.

"ಲಾಕ್‌ಡೌನ್‌ ಸಡಿಲಿಕೆ ಬಳಿಕ ಅಪರಾಧ ಪ್ರಕರಣ ಹೆಚ್ಚುವ ಸಂಭವ ಇದೆ. ನಿಯಂತ್ರಣ ಕ್ರಮಗಳ ಬಗ್ಗೆ ಜಾಗೃತಿ ವಹಿಸಿ ಸೂಚನೆ ನೀಡಲಾಗಿದೆ. ಅಲ್ಲದೇ ಅಪರಾಧ ತಡೆಗೆ ವಿಶೇಷ ಆಂದೋಲನ ಮಾಡುವಂತೆ, ಜನಸ್ನೇಹಿಯಾಗಿ ಜಾಗೃತಿ ಮೂಡಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ".

4014 ಸಿವಿಲ್, ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕ: ಅರ್ಜಿಗೆ ಅವಧಿ ವಿಸ್ತರಣೆ

2672 KSRP ಪೊಲೀಸ್ ಕಾನ್ಸ್‌ಟೇಬಲ್ ನೇಮಕ: ಆನ್‌ಲೈನ್‌ ಅರ್ಜಿಗೆ ದಿನಾಂಕ ವಿಸ್ತರಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ