ಆ್ಯಪ್ನಗರ

ಮೊರಾರ್ಜಿ ದೇಸಾಯಿ ಶಾಲೆಗಳ ವಿಜ್ಞಾನ ಶಿಕ್ಷಕರ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ, ಕಟ್‌ಆಫ್‌ ಅಂಕಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ...

Vijaya Karnataka Web 10 Nov 2020, 12:59 pm
ಕರ್ನಾಟಕ ಲೋಕಸೇವಾ ಆಯೋಗವು ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಾಮಾನ್ಯ ವಿಜ್ಞಾನ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಅಭ್ಯರ್ಥಿಗಳ ಆಯ್ಕೆಪಟ್ಟಿ ಮತ್ತು ಕಟ್‌ಆಫ್‌ ಅಂಕಪಟ್ಟಿಯನ್ನು ಪ್ರಕಟಿಸಿದೆ.
Vijaya Karnataka Web ಮೊರಾರ್ಜಿ ದೇಸಾಯಿ ಶಾಲೆಗಳ ವಿಜ್ಞಾನ ಶಿಕ್ಷಕರ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ, ಕಟ್‌ಆಫ್‌ ಅಂಕಪಟ್ಟಿ ಪ್ರಕಟ
mdrs science teacher additional list


2016 ರಲ್ಲಿ ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್‌ ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ 18 (11+7) ಸಾಮಾನ್ಯ ವಿಜ್ಞಾನ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ನಡೆಸಿತ್ತು. 2019 ರ ಜನವರಿ 17 ರಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿತ್ತು. ಈ ಅಭ್ಯರ್ಥಿಗಳ ಪೈಕಿ ಕೆಲವರು ಹುದ್ದೆಗೆ ರಿಪೋರ್ಟ್‌ ಮಾಡಿಕೊಳ್ಳದ ಕಾರಣ ನಿಯಮಾನುಸಾರ ಹೆಚ್ಚುವರಿ ಆಯ್ಕೆಪಟ್ಟಿಯ್ನು ಸಿದ್ಧಪಡಿಸಿ ಪ್ರಕಟಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗವು ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ ಬೆನ್ನಲ್ಲೇ, ಸಾಮಾನ್ಯ ವಿಜ್ಞಾನ ಶಿಕ್ಷಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದ ಕಟ್‌ಆಫ್‌ ಅಂಕಗಳನ್ನು ಪ್ರಕಟಿಸಿದೆ. ಈ ಪಟ್ಟಿಗಳನ್ನು ಚೆಕ್‌ ಮಾಡಲು ಅಭ್ಯರ್ಥಿಗಳು ಕೆಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿರಿ. ಅಥವಾ ಈ ಕೆಳಗಿನ ಡೈರೆಕ್ಟ್‌ ಲಿಂಕ್‌ಗಳನ್ನು ಕ್ಲಿಕ್ ಮಾಡಿರಿ.

Cut-off list for the post of Subject Teacher General Science in M D R S in the Directorate of Minority welfare

Additional Select list for the post of Subject Teacher General Science in M D R S in the Directorate of Minority welfare

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ