ಆ್ಯಪ್ನಗರ

ವಿಜ್ಞಾನ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ ನಗರದ ಮಹಾದೇವಪ್ಪ ರಾಂಪೂರೆ ಬಡಾವಣೆಯಲ್ಲಿನ ಮೊರಾರ್ಜಿ ದೇಸಾಯಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ 2020-21ನೇ..

Vijaya Karnataka Web 2 Jan 2021, 6:50 pm
ಕಲಬುರಗಿ ನಗರದ ಮಹದೇವಪ್ಪ ರಾಂಪೂರೆ ಬಡಾವಣೆಯಲ್ಲಿನ ಮೊರಾರ್ಜಿ ದೇಸಾಯಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ ಖಾಲಿಯಿರುವ ವಿಜ್ಞಾನ ಅತಿಥಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರತಿಭಾನ್ವಿತ ಬಾಲಕಿಯರ ವಸತಿ ಪ್ರೌಢಶಾಲೆಯ ಪ್ರಾಂಶುಪಾಲರಾದ ರಫಿಯಾ ರುಮಾನಾ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Vijaya Karnataka Web science guest teacher recruitment 2021
science guest teacher recruitment 2021


ವಿಜ್ಞಾನ ವಿಷಯ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಿಎಸ್ಸಿ ಜತೆಗೆ ಬಿ.ಇಡಿ ಶಿಕ್ಷಣ ಪಡೆದಿರಬೇಕು. ಹಾಗೂ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಅಥವಾ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಪ್ರಥಮ ಆಧ್ಯತೆ ನೀಡಲಾಗುವುದು.

ಶಿಕ್ಷಕ ಹುದ್ದೆಗೆ ನಿಗದಿಪಡಿಸಲಾದ ಅರ್ಹತೆಯುಳ್ಳ ಅಭ್ಯರ್ಥಿಗಳು 2021ರ ಜನವರಿ 7ರ ಸಂಜೆ 4.30 ಗಂಟೆಯೊಳಗಾಗಿ ಸ್ವ-ವಿವರಗಳನ್ನೊಳಗೊಂಡ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ವಸತಿ ಶಾಲೆಯನ್ನು ಸಂಪರ್ಕಿಸಲು ಕೋರಲಾಗಿದೆ.

ಹಾಸನ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

- ಬಿಎಸ್ಸಿ ಪಾಸ್‌ ಮಾಡಿದ ದಾಖಲೆ

- ಬಿ.ಇಡಿ ಪಾಸ್ ಮಾಡಿದ ದಾಖಲೆ

- ಸಿಟಿಇಟಿ ಅಥವಾ ಟಿಇಟಿ ಅರ್ಹತಾ ದಾಖಲೆ

- ಈ ಹಿಂದೆ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಕಾರ್ಯಾನುಭವ ಪ್ರಮಾಣ ಪತ್ರ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ