ಆ್ಯಪ್ನಗರ

ಎಂಆರ್‌ಪಿಎಲ್‌ನಲ್ಲಿ ಅಪ್ರೆಂಟಿಸ್‌ಶಿಪ್‌ಗೆ ಅವಕಾಶ: ಅರ್ಜಿ ಸಲ್ಲಿಕೆಗೆ ನಾಳೆ ಡೆಡ್‌ಲೈನ್

ಟೆಕ್ನಿಷಿಯನ್‌ ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಸಲ್ಲಿಸುವವರು ಸಂಬಂಧಪಟ್ಟ ವಿಷಯಗಳಲ್ಲಿ ಡಿಪ್ಲೊಮಾ ಮಾಡಿರಬೇಕು ಮತ್ತು ಗ್ರ್ಯಾಜುಯೇಟ್‌ ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಸಲ್ಲಿಸುವವರು ಆಯಾ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಎಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿರಬೇಕು.

Vijaya Karnataka Web 16 May 2019, 3:42 pm
ಮಂಗಳೂರಿನಲ್ಲಿರುವ 'ಮಿನಿ ರತ್ನ' ಖ್ಯಾತಿಯ ಸಾರ್ವಜನಿಕ ಉದ್ಯಮ 'ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ '(ಎಂಆರ್‌ಪಿಎಲ್‌) ಗ್ರ್ಯಾಜುಯೇಟ್‌ ಮತ್ತು ಟೆಕ್ನಿಷಿಯನ್‌ ಅಪ್ರೆಂಟಿಸ್‌ಶಿಪ್‌ಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನಾಳೆಯೊಳಗೆ (ಮೇ 17) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Vijaya Karnataka Web job


ಅಪ್ರೆಂಟಿಸ್‌ಶಿಪ್‌ ವಿವರ

87 ಅಭ್ಯರ್ಥಿಗಳಿಗೆ ಗ್ರ್ಯಾಜುಯೇಟ್‌ ಮತ್ತು 108 ಅಭ್ಯರ್ಥಿಗಳಿಗೆ ಟೆಕ್ನಿಷಿಯನ್‌ ಅಪ್ರೆಂಟಿಸ್‌ಶಿಪ್‌ ಪಡೆಯುವ ಅವಕಾಶ ಒದಗಿಸಲಾಗಿದೆ. ಕೆಮಿಕಲ್‌ ಎಂಜಿನಿಯರಿಂಗ್‌, ಸಿವಿಲ್‌, ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌, ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌, ಇನ್‌ಸ್ಟ್ರುಮೆಂಟೇಶನ್‌ ಎಂಜಿನಿಯರಿಂಗ್‌, ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಗ್ರ್ಯಾಜುಯೇಟ್‌ ಮತ್ತು ಟೆಕ್ನಿಷಿಯನ್‌ ಅಪ್ರೆಂಟಿಸ್‌ಶಿಪ್‌ ನೀಡಲಾಗುತ್ತದೆ. ಕಮರ್ಷಿಯಲ್‌ ಪ್ರ್ಯಾಕ್ಟೀಸ್‌ನಲ್ಲಿ ಕೇವಲ ಟೆಕ್ನಿಷಿಯನ್‌ ಅಪ್ರೆಂಟಿಸ್‌ಶಿಪ್‌ ಮಾತ್ರ ನೀಡಲಾಗುತ್ತದೆ.

ಅರ್ಹತೆಗಳೇನು?
ಟೆಕ್ನಿಷಿಯನ್‌ ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಸಲ್ಲಿಸುವವರು ಸಂಬಂಧಪಟ್ಟ ವಿಷಯಗಳಲ್ಲಿ ಡಿಪ್ಲೊಮಾ ಮಾಡಿರಬೇಕು ಮತ್ತು ಗ್ರ್ಯಾಜುಯೇಟ್‌ ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಸಲ್ಲಿಸುವವರು ಆಯಾ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಎಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿರಬೇಕು. 2016, 2017 ಮತ್ತು 2018ನೇ ಸಾಲಿನಲ್ಲಿ ಈ ವಿದ್ಯಾರ್ಹತೆ ಪೂರ್ಣಗೊಳಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ನಿಗದಿತ ವಿದ್ಯಾರ್ಹತೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇಕಡಾ 55, ಒಬಿಸಿ ವರ್ಗದವರು ಶೇಕಡಾ 45 ಮತ್ತು ಎಸ್‌ಸಿ/ಎಸ್‌ಟಿ ಮತ್ತು ವಿಕಲಚೇತನ ಅಭ್ಯರ್ಥಿಗಳು ಕನಿಷ್ಠ ಶೇಕಡಾ 40ರಷ್ಟು ಅಂಕಗಳನ್ನು ಪಡೆದು ಪಾಸಾಗಿರಬೇಕು.

ಇತ್ತ ಗಮನಿಸಿ: ಈಗಾಗಲೇ ಎಂಆರ್‌ಪಿಎಲ್‌ನಲ್ಲಿ ಅಪ್ರೆಂಟಿಸ್‌ಶಿಪ್‌ ಪಡೆದಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಸೇವಾನುಭವ ಇರುವವರೂ ಅರ್ಜಿ ಸಲ್ಲಿಸುವಂತಿಲ್ಲ. ನಿಗದಿತ ವಿದ್ಯಾರ್ಹತೆಗೆ ಸಂಬಂಧಪಟ್ಟಂತೆ ಅಂತಿಮ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರಿಗೂ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಆಯ್ಕೆ ಹೇಗೆ?: ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪರೀಕ್ಷೆಯಲ್ಲಿ ಬಹು ಆಯ್ಕೆ ಮಾದರಿಯ 50 ಅಂಕಗಳ 50 ಪ್ರಶ್ನೆಗಳಿಗೆ ಅಭ್ಯರ್ಥಿಗಳು ಉತ್ತರಿಸಬೇಕಾಗುತ್ತದೆ. ಪರೀಕ್ಷೆ ಬರೆಯಲು 90 ನಿಮಿಷ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ ನೆಗೆಟಿವ್‌ ಅಂಕ ಇರುವುದಿಲ್ಲ . ಪ್ರಶ್ನೆ ಪತ್ರಿಕೆ ಹಿಂದಿ/ ಇಂಗ್ಲಿಷ್‌ನಲ್ಲಿರುತ್ತದೆ. ಅರ್ಜಿ ಸಲ್ಲಿಸುವಾಗಲೇ ಪರೀಕ್ಷೆ ಬರೆಯುವ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿರುತ್ತದೆ. ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ

195 ಅಭ್ಯರ್ಥಿಗಳಿಗೆ ಅಪ್ರೆಂಟಿಸ್‌ಶಿಪ್‌ ಪಡೆಯಲು ಅವಕಾಶ
ಅರ್ಜಿ ಸಲ್ಲಿಸಲು ಅವಕಾಶ: ಏಪ್ರಿಲ್‌ 18ರಿಂದ ಮೇ 17, 2019
ತರಬೇತಿ ಅವಧಿ: ಒಂದು ವರ್ಷ
ಸ್ಟೈಪೆಂಡ್‌: 10,000 ರೂ.( ಗ್ರ್ಯಾಜುಯೇಟ್‌) ಮತ್ತು 7,100 ರೂ. (ಟೆಕ್ನಿಷಿಯನ್‌)
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್ ವಿಳಾಸ ನೋಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ